ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Rajasthan Election | ಕಾಂಗ್ರೆಸ್‌ನಿಂದ ರಾಜ್ಯ ದಿವಾಳಿ ಮಾಡುವ ಭರವಸೆ: ಪೂನಾವಾಲಾ

Published : 9 ನವೆಂಬರ್ 2023, 3:01 IST
Last Updated : 9 ನವೆಂಬರ್ 2023, 3:01 IST
ಫಾಲೋ ಮಾಡಿ
Comments

ಕೋಟಾ (ರಾಜಸ್ಥಾನ): ರಾಜಸ್ಥಾನದಲ್ಲಿ ಅಭಿವೃದ್ಥಿ, ಉತ್ತಮ ಆಡಳಿತ, ಕಾನೂನು ಮತ್ತು ಸುವ್ಯವಸ್ಥೆಯನ್ನು ನೀಡುವುದು ಬಿಜೆಪಿ ಪಕ್ಷದ ಚುನಾವಣಾ ಯೋಜನೆಯಾಗಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌ ಪಕ್ಷವು ರಾಜ್ಯವನ್ನು ದಿವಾಳಿ ಮಾಡುವ ಭರವಸೆಗಳನ್ನು ನೀಡಿದೆ ಎಂದು ಬಿಜೆಪಿ ವಕ್ತಾರ ಶೆಹಜಾದ್‌ ಪೂನಾವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಂಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಮಾಚಲ ಪ್ರದೇಶದಲ್ಲಿ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ನೀಡುವ ಭರವಸೆಯನ್ನು ನೀಡಿದ್ದರು. ಅಲ್ಲದೆ, ಹಣದುಬ್ಬರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವಿದ್ಯುತ್‌ ದರವನ್ನು ಕಡಿಮೆ ಮಾಡುವುದಾಗಿ ಪ್ರಿಯಾಂಕಾ ಗಾಂಧಿ ಅವರು ತಿಳಿಸಿದ್ದರು. ಆದರೆ, ಅಧಿಕಾರಕ್ಕೆ ಬಂದ ನಂತರ ಡೀಸೆಲ್‌ ಬೆಲೆಯನ್ನು 6 ರೂಪಾಯಿ ಹೆಚ್ಚಳ ಮಾಡಿದರು. ಇದಲ್ಲದೆ, ಕರ್ನಾಟಕದಲ್ಲಿ ಅಭಿವೃದ್ಧಿಗೆ ತಮ್ಮ ಬಳಿ ಹಣವಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುವ ಗ್ಯಾರಂಟಿಗಳನ್ನು ಕಾಂಗ್ರೆಸ್‌ ನೀಡಿದೆ. ಆದರೆ, ಬಿಜೆಪಿಯು ಅಭಿವೃದ್ಧಿ, ಉತ್ತಮ ಆಡಳಿತ, ಮೂಲಸೌಕರ್ಯ, ಕಾನೂನು ಹಾಗೂ ಸುವ್ಯವಸ್ಥೆಯ ಭರವಸೆಯನ್ನು ನೀಡಿದೆ. ರಾಜಸ್ಥಾನದ ಖಜಾನೆ ಖಾಲಿಯಾಗಿದ್ದು, ಸರ್ಕಾರವು ಸಂಬಳ ಮತ್ತು ಪಿಂಚಣಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಪೂನಾವಾಲಾ ಹೇಳಿದರು.

ಜನಸಂಖ್ಯೆಯನ್ನು ನಿಯಂತ್ರಿಸಲು ಮಹಿಳಾ ಶಿಕ್ಷಣದ ಪ್ರಾಮುಖ್ಯತೆಯ ಕುರಿತು ವಿಧಾನಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿಕೆಯ ಕುರಿತು ಕಾಂಗ್ರೆಸ್‌ ನಾಯಕರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೌನವನ್ನು ಪೂನಾವಾಲಾ ಪ್ರಶ್ನಿಸಿದರು.

‘ನಿತೀಶ್‌ ಕುಮಾರ್‌ ಅವರ ರಾಜೀನಾಮೆ ಕೇಳುವ ಬದಲು, ‘ಇಂಡಿಯಾ’ ಮೈತ್ರಿಕೂಟದ ಜನರು ಅವರ ಹೇಳಿಕೆಯನ್ನು ಬೆಂಬಲಿಸುತ್ತಿದ್ದಾರೆ. ಇದು ಮಹಿಳೆಯರಿಗೆ ಮಾಡಿದ ಅವಮಾನ’ ಎಂದು ಪೂನಾವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT