ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ನಮ್ಮನ್ನು ಗುರಿಯಾಗಿಸಿಕೊಂಡಿದೆ, ನಾವು ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ

Published 21 ಏಪ್ರಿಲ್ 2024, 14:34 IST
Last Updated 21 ಏಪ್ರಿಲ್ 2024, 14:34 IST
ಅಕ್ಷರ ಗಾತ್ರ

ಕುಮಾರಗಂಜ್: ಬಿಜೆಪಿಯು ತನ್ನನ್ನು ಮತ್ತು ಸೋದರಳಿಯ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಆರೋಪಿಸಿದ್ದು, ತಾವು ಸುರಕ್ಷಿತವಲ್ಲ ಎಂದು ತಿಳಿಸಿದ್ದಾರೆ. 

ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿ, ‘ಸೋಮವಾರ ದೊಡ್ಡ ಸ್ಫೋಟ ಸಂಭವಿಸಲಿದ್ದು, ಅದರಿಂದ ಟಿಎಂಸಿ ಮತ್ತು ಅದರ ವರಿಷ್ಠರು ಕಂಪಿಸಲಿದ್ದಾರೆ’ ಎಂದು ಹೇಳಿಕೆ ನೀಡಿದ್ದ ಮರುದಿನ ಮಮತಾ, ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ.

ಕುಮಾರಗಂಜ್ ಲೋಕಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ, ರಾಜ್ಯ ಸಚಿವ ವಿಪ್ಲವ್ ಮಿತ್ರ ಅವರ ಪರವಾಗಿ ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

‘ಕೇಸರಿ ಪಕ್ಷದ ಕುತಂತ್ರಕ್ಕೆ ನಾವು ಹೆದರುವುದಿಲ್ಲ. ಟಿಎಂಸಿ ಮುಖಂಡರು ಮತ್ತು ಪಶ್ಚಿಮ ಬಂಗಾಳದ ಜನರ ವಿರುದ್ಧದ ಷಡ್ಯಂತ್ರದ ಬಗ್ಗೆ ಎಚ್ಚರದಿಂದ ಇರುವಂತೆ ನಾನು ಎಲ್ಲರನ್ನೂ ಕೇಳಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ಸುವೇಂದು ಹೇಳಿಕೆಗೆ ಪ್ರತಿಕ್ರಿಯಿಸಿದ ಮಮತಾ, ‘ಒಬ್ಬ ವಿಶ್ವಾಸಘಾತುಕ ತನ್ನ ಕುಟುಂಬ ಮತ್ತು ಅಕ್ರಮ ಸಂಪತ್ತನ್ನು ರಕ್ಷಿಸಿಕೊಳ್ಳಲು ಬಿಜೆಪಿ ಸೇರಿ ಸೇರಿದರು. ಅವರ ಬೆದರಿಕೆಯನ್ನು ನಾನು ಗಣನೆಗೆ ತೆಗೆದುಕೊಳ್ಳುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT