ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಪ್ರಯೋಜನಗಳನ್ನು ಪ್ರಚಾರ ಮಾಡಲು ಹಾಗೂ ಕಾಯ್ದೆ ಕುರಿತು ವಿಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಲು, ಬಿಜೆಪಿಯು ರಾಷ್ಟ್ರದಾದ್ಯಂತ ಏ.20ರಿಂದ 15 ದಿನಗಳ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ. ವಿಶೇಷವಾಗಿ ಮುಸ್ಲಿಮರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಯೋಜಿಸಲಾಗಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ ತಿಳಿಸಿದರು.

ಇಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ ನಡ್ಡಾ, ‘ಬಡ ಮುಸ್ಲಿಮರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ವಕ್ಫ್ ಆಸ್ತಿಗಳನ್ನು ಬಳಸಿಕೊಳ್ಳಲು ತಿದ್ದುಪಡಿ ಮಾಡಲಾದ ಕಾಯ್ದೆಯಿಂದ ಅನುಕೂಲ ಆಗಲಿದೆ. ಅಲ್ಲದೇ, ಕೆಲವಷ್ಟೇ ಪ್ರಭಾವಿ ಜನರು ವಕ್ಫ್ ಆಸ್ತಿಯ ನಿಯಂತ್ರಣ ಹೊಂದುವುದು ತಪ್ಪಲಿದೆ. ಆಸ್ತಿಯು ಅಲ್ಪಸಂಖ್ಯಾತ ಸಮುದಾಯದ ಒಟ್ಟಾರೆ ಪ್ರಯೋಜನಕ್ಕಾಗಿ ಬಳಕೆಯಾಗುತ್ತದೆ’ ಎಂದು ಹೇಳಿದರು.

ಮೇ.5ರಂದು ಮುಕ್ತಾಯಗೊಳ್ಳಲಿರುವ ಅಭಿಯಾನದ ನೇತೃತ್ವವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜಮಾಲ್ ಸಿದ್ದೀಕ್ ಅವರು ವಹಿಸಿಕೊಳ್ಳಲಿದ್ದಾರೆ. ಮುಸ್ಲಿಂ ಸಮುದಾಯದವರೊಂದಿಗೆ ಸಭೆ ಹಾಗೂ ಸುದ್ದಿಗೋಷ್ಠಿಗಳನ್ನು ನಡೆಸಲು ಬಿಜೆಪಿ ಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿರೋಧ ಪಕ್ಷಗಳು ತಮ್ಮ ಮತ ಬ್ಯಾಂಕ್ ರಾಜಕಾರಣದ ಭಾಗವಾಗಿ ವಕ್ಫ್ ಮಸೂದೆ ವಿಚಾರದಲ್ಲಿ ಮುಸ್ಲಿಮರ ದಾರಿ ತಪ್ಪಿಸುತ್ತಿವೆ.
ಜೆ.ಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಮುಸ್ಲಿಮರ ಧಾರ್ಮಿಕ ವ್ಯವಹಾರಗಳಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯು ಹಸ್ತಕ್ಷೇಪ ಮಾಡುತ್ತದೆ ಎಂಬ ಆರೋಪವನ್ನು ರಿಜಿಜು ಹಾಗೂ ನಡ್ಡಾ ಸಂಪೂರ್ಣವಾಗಿ ಅಲ್ಲಗಳೆದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿನ ವಕ್ಫ್ ಮಂಡಳಿಯ ಸದಸ್ಯರು ಹಾಗೂ ಅಲ್ಪಸಂಖ್ಯಾತ ವಿಭಾಗ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಒಂದು ದಿನದ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ವಕ್ಫ್ ಕಲ್ಯಾಣ ಕಾರ್ಯಕ್ರಮಗಳಲ್ಲಿ ಹಾಗೂ ಅದರ ಆಸ್ತಿಯ ಪಾರದರ್ಶಕ ಮತ್ತು ಸಮರ್ಥ ನಿರ್ವಹಣೆಯಲ್ಲಿ ಪಸ್ಮಂದಾ (ಹಿಂದುಳಿದ) ಮುಸ್ಲಿಮರು ಮತ್ತು ಮಹಿಳೆಯರು ಒಳಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನಿಶ್ಚಯಿಸಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.