ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

Published 13 ಏಪ್ರಿಲ್ 2024, 13:53 IST
Last Updated 13 ಏಪ್ರಿಲ್ 2024, 13:53 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆಗೆ ಸಿದ್ಧಪಡಿಸಿರುವ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಭಾನುವಾರ ಬಿಡುಗಡೆ ಮಾಡಲಿದೆ. ‘ವಿಕಸಿತ ಭಾರತ’ದ ನೀಲನಕ್ಷೆಗೆ ಪ್ರಣಾಳಿಕೆಯಲ್ಲಿ ಆದ್ಯತೆ ಲಭಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಳಗೊಂಡಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. 

ಬಿಜೆಪಿ ಸರ್ಕಾರವು ಅಯೋಧ್ಯೆ ರಾಮಮಂದಿರ ನಿರ್ಮಾಣ ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವುದು ಸೇರಿದಂತೆ ತನ್ನ ಪ್ರಮುಖ ಸೈದ್ಧಾಂತಿಕ ಭರವಸೆಗಳನ್ನು ಈಡೇರಿಸಿರುವುದರಿಂದ, ಈ ಬಾರಿಯ ಪ್ರಣಾಳಿಕೆಯಲ್ಲಿ ಸಂಸ್ಕೃತಿ ಮತ್ತು ಹಿಂದುತ್ವಕ್ಕೆ ಸಂಬಂಧಿಸಿದ ಯಾವೆಲ್ಲಾ ಕಾರ್ಯಸೂಚಿಗಳು ಇರಲಿವೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಯುವಕರು, ಮಹಿಳೆಯರು, ರೈತರು ಮತ್ತು ಬಡವರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯೂ ಪ್ರಣಾಳಿಕೆಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಬಿಜೆಪಿಯು ಪ್ರಣಾಳಿಕೆ ಸಿದ್ಧಪಡಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ಸಮಿತಿಯನ್ನು ನೇಮಕ ಮಾಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT