ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಶನಿವಾರ) ಅವರನ್ನು ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ದಾಖಲಾದ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
.ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು.ಆರೋಗ್ಯದಲ್ಲಿ ಏರುಪೇರು: BJP ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು.
ಎರಡು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರರೋಗ ತಜ್ಞ ಡಾ.ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಳೆದ ಜುಲೈನಲ್ಲಿ ಅಡ್ವಾಣಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಆಗಸ್ಟ್ನಲ್ಲಿ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ಅಯೋಧ್ಯೆ ರಾಮಮಂದಿರ ಹೋರಾಟದ ಮೂಲಕ ಹಿಂದುತ್ವದ ಬದ್ಧ ಪ್ರತಿಪಾದಕ, 'ಲೋಹ ಪುರುಷ' ಎಂದೇ ಗುರುತಿಸಿಕೊಂಡಿದ್ದ ಅಡ್ವಾಣಿ 1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ (ಈಗಿನ ಪಾಕಿಸ್ತಾನ) ಜನಿಸಿದ್ದರು.

ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಮುಂದೆ ಸಿಂಧ್ ಪ್ರಾಂತ್ಯದ ಹೈದರಾಬಾದ್ನ ಡಿ.ಜಿ.ನ್ಯಾಷನಲ್ ಕಾಲೇಜಿನಲ್ಲಿ ಪದವಿ, ಬಳಿಕ ಬಾಂಬೆಯ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದರು. 1947ರಲ್ಲಿ ಆರ್ಎಸ್ಎಸ್ ಸೇರಿದ ಅವರು, ರಾಜಸ್ಥಾನದಲ್ಲಿ ಸಂಘದ ಉಸ್ತುವಾರಿ ವಹಿಸಿಕೊಂಡಿದ್ದರು.

ನಂತರ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದರು. ಉಪಪ್ರಧಾನಿಯಾಗಿಯೂ ಕೆಲಸ ಮಾಡಿದ್ದರು. ಅವರ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಿ ಗೌರವಿಸಲಾಗಿತ್ತು.
.ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ.Birthday: ದೇಶದ ಅಭಿವೃದ್ಧಿಗೆ ತಮ್ಮನ್ನು ಅರ್ಪಿಸಿಕೊಂಡ ಅಡ್ವಾಣಿ: ಪ್ರಧಾನಿ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.