ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ತರಲಿದೆ: ಸುವೆಂದು ಅಧಿಕಾರಿ

Published 25 ಫೆಬ್ರುವರಿ 2024, 3:05 IST
Last Updated 25 ಫೆಬ್ರುವರಿ 2024, 3:05 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಡಬಲ್‌ ಎಂಜಿನ್‌ ಸರ್ಕಾರವನ್ನು ತರಲು ಮತ್ತು ರಾಜ್ಯದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಆಡಳಿತವನ್ನು ಕೊನೆಗೊಳಿಸಲು ತಮ್ಮ ಪಕ್ಷವು ಕೆಲಸ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ.

ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಆಯೋಜಿಸಲಾಗಿದ್ದ ‘ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ’ ಕುರಿತಾದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಮಾತನಾಡಿದ ಅವರು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಸರ್ಕಾರವು ಹಿಂದೂಗಳ ವಿರುದ್ಧ ಹಿಂಸಾಚಾರ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ.

‘ಇಂದು, ಟಿಎಂಸಿ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿನ ಹಿಂದೂಗಳು ಅಪಾಯಕ್ಕೆ ಸಿಲುಕಿದ್ದಾರೆ. ಪಕ್ಷವು ಬಾಂಗ್ಲಾದೇಶ ವಲಸಿಗರನ್ನು ರಾಜ್ಯಕ್ಕೆ ಪ್ರವೇಶಿಸಲು ಮತ್ತು ನೆಲೆಸಲು ಅನುಮತಿ ನೀಡುವ ಮೂಲಕ ರಾಜ್ಯದ ಜನಸಂಖ್ಯೆಯನ್ನು ಬದಲಾಯಿಸುತ್ತಿದೆ. ಟಿಎಂಸಿ ಸರ್ಕಾರವು ನಿಧಾನವಾಗಿ ಹಾಗೂ ಕ್ರಮೇಣವಾಗಿ ಪಶ್ಚಿಮ ಬಂಗಾಳವನ್ನು ಬಾಂಗ್ಲಾದೇಶದ ಭಾಗವನ್ನಾಗಿ ಬದಲಾಯಿಸುತ್ತಿದೆ’ ಎಂದು ಆರೊಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರವನ್ನು ಸ್ಥಾಪಿಸಲು ಬಿಜೆಪಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಘಟನೆಗಳನ್ನು ಟೀಕಿಸಿದ ಅಧಿಕಾರಿ, ಜೆಎನ್‌ಯು ವಿದ್ಯಾರ್ಥಿಗಳು ಇಂತಹ ವಿಷಯಗಳ ವಿರುದ್ಧ ಧ್ವನಿ ಎತ್ತಬೇಕು ಎಂದು ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಶಹಜಹಾನ್‌ ಶೇಖ್‌ ಮತ್ತು ಸಹಚರರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT