ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳವನ್ನು ನಿರ್ಲಕ್ಷಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಸುಳ್ಳು ಆರೋಪ ಮಾಡುತ್ತಿದ್ದು ಬದಲಿಗೆ ಕೇಂದ್ರದ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮಮತಾ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಅವರು ಆರೋಪ ಮಾಡಿದರು.

2019ರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಮತ ಪ್ರಮಾಣ ಶೇ. 40ರಷ್ಟಿದ್ದು ಇನ್ನೂ ಶೇ.10ರಷ್ಟು ಮತಗಳನ್ನು ಪಡೆದರೆ, ನಾವು ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದರು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯ ಭ್ರಷ್ಟ ನಾಯಕ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ತಿರಸ್ಕರಿಸುವ ಮೂಲಕ ಜನರು ಬಿಜೆಪಿಯ ಮೇಲೆ ಅಗಾಧ ನಂಬಿಕೆ ಇರಿಸಿದ್ದಾರೆ ಎಂದರು.

ಬಂಗಾಳದಲ್ಲಿ ಬಿಜೆಪಿ ಬಲವಾಗುತ್ತಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಛಾಪು ಮೂಡಿಸಿದೆ. 2021ರ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ 12 ಸ್ಥಾನಗಳನ್ನು ನಾವು ಗೆದ್ದಿದ್ದೇವೆ ಎಂದರು.

2026ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ಪ್ರಧಾನ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.