ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Telangana Elections: ತೆರೆದ ವಾಹನದಲ್ಲಿ ಮೋದಿ ರೋಡ್‌ ಶೋ

Published 27 ನವೆಂಬರ್ 2023, 16:15 IST
Last Updated 27 ನವೆಂಬರ್ 2023, 16:15 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ನಾಲ್ಕು ದಿವಸ ಬಾಕಿ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್‌ನ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿದರು. ಎರಡೂವರೆ ಕಿ.ಮೀ. ಉದ್ದದ ರಸ್ತೆಯ ಎರಡೂ ಬದಿಗಳಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ಮೋದಿ.. ಮೋದಿ.. ಎಂದು ಉದ್ಗಾರ ಕೂಗಿದರು.

ಕೇಂದ್ರ ಸಚಿವ ಜಿ. ಕಿಶನ್‌ ರೆಡ್ಡಿ ಮತ್ತು ರಾಜ್ಯಸಭೆ ಸದಸ್ಯ ಕೆ. ಲಕ್ಷ್ಮಣ್‌ ಅವರು ಮೋದಿ ಜತೆಗಿದ್ದರು. 

ಇದಕ್ಕೂ ಮೊದಲು ಮೋದಿ ಅವರು ಆಂಧ್ರಪ್ರದೇಶದ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಹಬೂಬಾಬಾದ್‌ ಮತ್ತು ಕರೀಂನಗರಕ್ಕೆ ತೆರಳಿ ಪ್ರಚಾರ ರ‍್ಯಾಲಿ ನಡೆಸಿದರು. ‘ಬಿಜೆಪಿ ಜನಪ್ರಿಯತೆ ಗಳಿಸುತ್ತಿರುವ ವೇಗವನ್ನು ಮನಗಂಡಿದ್ದ ಬಿಆರ್‌ಎಸ್‌ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್‌ ಅವರು ತಮ್ಮ ಪಕ್ಷದ ಜೊತೆ ಸ್ನೇಹ ಸಾಧಿಸಲು ಪ್ರಯತ್ನಿಸಿದ್ದರು’ ಎಂದು ಕರೀಂನಗರದಲ್ಲಿ ಮೋದಿ ಆರೋಪಿಸಿದರು.

‘ಇದೇ ಮೊದಲ ಬಾರಿಗೆ ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಮತ್ತು ಹಿಂದುಳಿದ ವರ್ಗಗಳ ನಾಯಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ’ ಎಂದರು. ತೆಲಂಗಾಣ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT