ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ ಪ್ರಕರಣ | ಸ್ತ್ರೀಯರಿಗೆ ಅವಮಾನ ಸಹಿಸಲ್ಲ: ಅಮಿತ್‌ ಶಾ

ಪ್ರಜ್ವಲ್‌ ಪ್ರಕರಣ: ಮಹಿಳೆಯರ ಅವಮಾನ ಬಿಜೆಪಿ ಸಹಿಸಲ್ಲ– ಅಮಿತ್‌ ಶಾ
Published 30 ಏಪ್ರಿಲ್ 2024, 14:28 IST
Last Updated 30 ಏಪ್ರಿಲ್ 2024, 19:01 IST
ಅಕ್ಷರ ಗಾತ್ರ

ಗುವಾಹಟಿ: ಸಂಸದ ಪ್ರಜ್ವಲ್‌ ರೇವಣ್ಣ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಪ್ರಕರಣದ ತನಿಖೆಗೆ ಬಿಜೆಪಿಯೂ ಒಲವು ಹೊಂದಿದೆ ಎಂದಿರುವ ಗೃಹ ಸಚಿವ ಅಮಿತ್‌ ಶಾ ಅವರು, ‘ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಈ ಕುರಿತು ಇಲ್ಲಿಯವರೆಗೆ ಏಕೆ ಕ್ರಮ ತೆಗೆದುಕೊಂಡಿಲ್ಲ’ ಎಂದೂ ಪ್ರಶ್ನಿಸಿದರು.

‘ಈ ಪ್ರಕರಣ ತುಂಬ ನೋವುಂಟು ಮಾಡಿದೆ’ ಎಂದ ಅವರು ‘ಮಹಿಳೆಯರ ಅವಮಾನವನ್ನು ಬಿಜೆಪಿ ಸಹಿಸುವುದಿಲ್ಲ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

‘ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಮಾತೃ ಮತ್ತು ನಾರಿ ಶಕ್ತಿಯ (ಮಹಿಳಾ ಸಬಲೀಕರಣ) ಅವಮಾನವನ್ನು ನಾವು ಸಹಿಸುವುದಿಲ್ಲ’ ಎಂದು ಅವರು ಹೇಳಿದರು.

‘ಈ ಪ್ರಕರಣದಲ್ಲಿ ಎನ್‌ಡಿಎ ಅಭ್ಯರ್ಥಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ಯಾರ ಸರ್ಕಾರವಿದೆ. ಅಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ಈ ವಿಷಯ ಅವರ ಗಮನಕ್ಕೆ ಬಂದಿರಬೇಕಲ್ಲವೇ?. ಇಲ್ಲಿಯವರೆಗೆ ಅದರ ಬಗ್ಗೆ  ಕರ್ನಾಟಕ ಸರ್ಕಾರ ಏಕೆ ಕ್ರಮ ತೆಗೆದುಕೊಂಡಿಲ್ಲ? ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿರುವುದರಿಂದ, ನಾವು (ಕೇಂದ್ರ) ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಅಮಿತ್ ಶಾ ಪ್ರತಿಕ್ರಿಯಿಸಿದರು. 

ಬಿಜೆಪಿಯು ತನ್ನ ಮಿತ್ರ ಪಕ್ಷದವಾದ ಜೆಡಿಎಸ್‌ ಅನ್ನು ರಕ್ಷಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾ, ‘ಪ್ರಿಯಾಂಕಾ ಅವರು ಈ ಕುರಿತು ಮೊದಲು ಕರ್ನಾಟಕದಲ್ಲಿನ ತಮ್ಮ ಪಕ್ಷದ ಸರ್ಕಾರವನ್ನು ಪ್ರಶ್ನಿಸಬೇಕು’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT