ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನದ ಎಲ್ಲ 25 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು: ಸಚಿವ ಶೇಖಾವತ್‌

Published 24 ಫೆಬ್ರುವರಿ 2024, 14:03 IST
Last Updated 24 ಫೆಬ್ರುವರಿ 2024, 14:03 IST
ಅಕ್ಷರ ಗಾತ್ರ

ಜೈಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದ ಎಲ್ಲ 25 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದ್ದಾರೆ.

‘ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಸಂವಿಧಾನದ 370ನೇ ವಿಧಿಯಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮತ್ತು ಪೂರ್ವ ರಾಜಸ್ಥಾನ ಕಾಲುವೆ ಯೋಜನೆಯ ಸಮಸ್ಯೆ ನಿವಾರಣೆ ಇವೆಲ್ಲವು ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ನೆರವಾಗಲಿದೆ. ಆದರೆ, ಬಿಜೆಪಿಯು ಇದನ್ನು ಮತಕ್ಕಾಗಿ ಮಾಡಿಲ್ಲ, ಬದಲಾಗಿ ಜನರ ಉತ್ತಮ ಜೀವನಶೈಲಿಗಾಗಿ ಮಾಡಿದೆ’ ಎಂದು ಅವರು ತಿಳಿಸಿದ್ದಾರೆ.

‘ರಾಜ್ಯದ ಎಲ್ಲ 25 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. 2014ರಿಂದ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಪ್ರವೃತ್ತಿ ಬಿಜೆಪಿಯಲ್ಲಿದೆ’ ಎಂದು ಶೇಖಾವತ್‌ ತಿಳಿಸಿದ್ದಾರೆ.

ಬಿಜೆಪಿ ಸಾಮಾಜಿಕ ಕಳಕಳಿ, ರಾಷ್ಟ್ರೀಯ ಪ್ರಾಮುಖ್ಯತೆ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತನ್ನ ಅಸ್ತಿತ್ವವನ್ನು ನಿರಂತರವಾಗಿ ಹೆಚ್ಚಿಸಿಕೊಂಡು ಬಂದಿರುವ ಪಕ್ಷವಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಬಿಜೆಪಿ ಕಾರ್ಯಕರ್ತರ ನಿರಂತರ ಪರಿಶ್ರಮದ ಫಲವಾಗಿ ನಾವು ಕಾಂಗ್ರೆಸ್‌ ಅನ್ನು ಬುಡ ಸಮೇತ ಕಿತ್ತು ಹಾಕಿದ್ದೇವೆ. ಅದೇ ವಿಶ್ವಾಸದ ಆಧಾರದ ಮೇಲೆ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದ ಪ್ರಗತಿಗೆ ಬಿಜೆಪಿ ಹೇಗೆ ಕೆಲಸ ಮಾಡಿದೆ ಎಂದು ನಾನು ಹೇಳಬಲ್ಲೆ. ಬಿಜೆಪಿಯು ಮತ್ತೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT