ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್‌ನಲ್ಲಿ ಮೋದಿ, ಅಮಿತ್ ಶಾ ಪರಿಣಾಮದಿಂದ ಬಿಜೆಪಿಗೆ ಗೆಲುವು: ಕಮಲನಾಥ್

Last Updated 15 ಡಿಸೆಂಬರ್ 2022, 10:59 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಕಮಲನಾಥ್ ಗುರುವಾರ ಹೇಳಿದ್ದಾರೆ.

ತವರು ರಾಜ್ಯವಾದ ಗುಜರಾತ್‌ನ ಜನರ ಮೇಲೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಪರಿಣಾಮ ಬೀರಿದ್ದಾರೆ ಎಂದು ಅವರು ಹೇಳಿದರು.

ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಗೆಲುವು ದಾಖಲಿಸಿತ್ತು. 182 ಸದಸ್ಯ ಬಲದ ಗುಜರಾತ್ ಚುನಾವಣೆಯಲ್ಲಿ 156 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ಗುಜರಾತ್‌ನಲ್ಲಿ ಸತತ ಏಳನೇ ಬಾರಿಗೆ ಬಿಜೆಪಿ ಗದ್ದುಗೆಗೆ ಏರಿದೆ. ಮೊರ್ಬಿ ಸೇತುವೆ ದುರಂತ, ಬೆಲೆ ಏರಿಕೆ ಸೇರಿದಂತೆ ಹಲವು ಚರ್ಚಾ ವಿಷಯಗಳಿದ್ದರೂ ಬಿಜೆಪಿ ಬಿಗಿ ಹಿಡಿತವಿರುವ ಗುಜರಾತ್‌ನಲ್ಲಿ ಪ್ರಧಾನಿ ಮೋದಿ ನಿರ್ಣಾಯಕ ಅಂಶವಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT