ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ | BJP- BJD ಕಾರ್ಯಕರ್ತರ ಮಾರಾಮಾರಿ: ಓರ್ವ ಸಾವು, 7 ಮಂದಿಗೆ ಗಾಯ

Published 16 ಮೇ 2024, 7:04 IST
Last Updated 16 ಮೇ 2024, 7:04 IST
ಅಕ್ಷರ ಗಾತ್ರ

ಬೆರ್ಹಾಂಪುರ (ಒಡಿಶಾ): ಆಡಳಿತರೂಢ ಬಿಜೆಡಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಖಾಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕೃಷ್ಣ ಸರಾನ್‌ಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಪೋಸ್ಟರ್ ಅಂಟಿಸುವ ಸಂಬಂಧ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಜಗಳ ನಡೆದಿದೆ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಪಹಾನ (26) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡಿದ್ದ ದಿಲೀಪ್ ಕುಮಾರ್ ಅವರನ್ನು ಇಲ್ಲಿನ ಎಂಕೆಇಸಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳದ ವೇಳೆ ಇತ್ತಂಡಗಳೂ ಚೂಪಾದ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ. ಗಾಯಾಳುಗಳು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಲ್ಲಿಕೋಟೆ ವಿಧಾನಸಭೆ ಕ್ಷೇತ್ರದ ಬಿಜೆಡಿ ಅಭ್ಯರ್ಥಿ ಹಾಗೂ ಶಾಸಕಿ ಸೂರ್ಯಮಣಿ ವೈದ್ಯ ಅವರ ಮನೆಯ ಸಮೀಪ ಇದ್ದ ಹಲವು ಕಾರುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT