ಕೋಲ್ಕತ್ತ : ಪಕ್ಷದ ಕಾರ್ಯಕರ್ತನ ಹತ್ಯೆ ಖಂಡಿಸಿಪಶ್ಚಿಮ ಬಂಗಾಳದ ಖಾನಕುಲ್‌ನಲ್ಲಿಬಿಜೆಪಿ ಭಾನುವಾರ ಕರೆ ನೀಡಿದ್ದ ಬಂದ್ ಭಾಗಶಃ ಯಶಸ್ವಿಯಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹುತೇಕ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಜನರ ಸಂಚಾರ ವಿರಳವಾಗಿತ್ತು.

ರಾಷ್ಟ್ರಧ್ವಜವನ್ನು ಹಾರಿಸಿದ್ದಕ್ಕಾಗಿ ಪಕ್ಷದ ಕಾರ್ಯಕರ್ತ ಸುದರ್ಶನ್ ಪ್ರಮಣಿಕ್ (40) ಅವರನ್ನು ಟಿಎಂಸಿ ಬೆಂಬಲಿಗರು ಥಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಟಿಎಂಸಿ ನಿರಾಕರಿಸಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜ ಹಾರಿಸುವ ಸಂಬಂಧ, ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.ಘಟನೆ ಸಂಬಂಧ ಈವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.