ಪಟ್ನಾ: ಬಿಹಾರದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಎಲ್ಲಾ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ‘ಮಹಾಘಟಬಂಧನ‘ ಗೆಲುವು ಸಾಧಿಸಲಿದೆ. ಈ ಮೂಲಕ ಮೊದಲ ದಿನವೇ ಬಿಜೆಪಿಯ 400 ಪ್ಲಸ್ ಸಿನಿಮಾ ಸೂಪರ್ ಫ್ಲಾಪ್ ಆಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ 400 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಆದರೆ ಬಿಹಾರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿಯೇ ವಿಫಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘2019ರ ಚುನಾವಣೆಗೆ ಹೊಲಿಕೆ ಮಾಡಿದರೆ ಈ ಬಾರಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿದೆ. ಆದರೆ ಕ್ಷೇತ್ರಗಳಿಂದ ಬಂದ ಪ್ರತಿಕ್ರಿಯೆಯ ಆಧಾರದ ಮೇಲೆ ಈ ಬಾರಿ ನಾವು ಗೆಲ್ಲುತ್ತೇವೆ‘ ಎಂದಿದ್ದಾರೆ.

ವಿಕಾಸಶೀಲ್ ಇನ್ಸಾನ್ ಪಾರ್ಟಿಯ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರು ಸಹ ಬಿಹಾರದಲ್ಲಿ 'ಮಹಾಘಟಬಂಧನ' ಗೆಲುವು ಸಾಧಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ನಡೆದ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲದೇ ಮುಂದಿನ ಹಂತಗಳಲ್ಲಿ 36 ಕ್ಷೇತ್ರಗಳಲ್ಲಿ ನಡೆಯಲಿರುವ ಮತದಾನದಲ್ಲಿಯೂ ನಾವು ಗೆಲುವು ಸಾಧಿಸುತ್ತೇವೆ ಎಂದು ಸಹಾನಿ ಹೇಳಿದ್ದಾರೆ.

ಜಮುಯಿ, ನವಾಡ, ಗಯಾ ಮತ್ತು ಔರಂಗಾಬಾದ್ ನಾಲ್ಕು ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿದೆ. ಬಿಹಾರದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ 48.23ರಷ್ಟು ಮತದಾನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.