ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಬಿಸಿ ನಾಯಕ ಸಿ.ಎಂ: ಅಮಿತ್ ಶಾ

Published 27 ಅಕ್ಟೋಬರ್ 2023, 13:40 IST
Last Updated 27 ಅಕ್ಟೋಬರ್ 2023, 13:40 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. 

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಸೂರ್ಯಪೇಟ್‌ನಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಅಮಿತ್‌ ಶಾ ಮಾತನಾಡಿದರು. 

ಬಿಜೆಪಿ ಸರ್ಕಾರ ರಚನೆಯಾದರೆ, ಮುಂದಿನ ಮುಖ್ಯಮಂತ್ರಿ ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕನನ್ನು ಆಯ್ಕೆ ಮಾಡಲಾಗುವುದು. ಇದನ್ನು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.

ಇದೇ ವೇಳೆ ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ ವಂಶಪಾರಂಪರ್ಯ ಪಕ್ಷಗಳಾಗಿವೆ. ಇವುಗಳಿಂದ ರಾಜ್ಯಕ್ಕೆ ಒಳಿತನ್ನು ಮಾಡಲು ಸಾಧ್ಯವಿಲ್ಲ ಎಂದು ಅಮಿತ್‌ ಶಾ ಹೇಳಿದರು. 

ಈ ಹಿಂದೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ದಲಿತ ನಾಯಕನನ್ನು ಮುಖ್ಯಮಂತ್ರಿ ಮಾಡುವುದು ಹಾಗೂ ದಲಿತರಿಗೆ ಮೂರು ಎಕರೆ ಭೂಮಿ ನೀಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಅವರು ಆರೋಪಿಸಿದರು.

ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಮಗ ಕೆ.ಟಿ.ರಾಮರಾವ್ ಅವರನ್ನು ಮುಖ್ಯಮಂತ್ರಿ ಮಾಡಲು ಬಯಸಿದರೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಬಯಸಿದ್ದಾರೆ ಎಂದು ಅವರು ಹೇಳಿದರು.

ಈ ಚುನಾವಣಾ ರ್‍ಯಾಲಿಯಲ್ಲಿ ಬಿಜೆಪಿ ಬೆಂಬಲಸಿವಂತೆ ಅಮಿತ್‌ ಶಾ ಜನರಲ್ಲಿ ಮನವಿ ಮಾಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT