ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನ ಮೊದಲ ಬಿಜೆಪಿ ಶಾಸಕ ವೇಲಾಯುಧನ್‌ ನಿಧನ

Published 8 ಮೇ 2024, 14:23 IST
Last Updated 8 ಮೇ 2024, 14:23 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಮೊದಲ ಬಿಜೆಪಿ ಶಾಸಕ ಸಿ. ವೇಲಾಯುಧನ್‌ ಬುಧವಾರ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಕನ್ಯಾಕುಮಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಮುರುಗನ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲ್ಲೈ ಅವರು ವೇಲಾಯುಧನ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

1996ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕನ್ಯಾಕುಮಾರಿ ಜಿಲ್ಲೆಯ ಪದ್ಮನಾಭಪುರಂ ವಿಧಾನಸಭಾ ಕ್ಷೇತ್ರದಿಂದ ವೇಲಾಯುಧನ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಡಿಎಂಕೆ ಪಕ್ಷದ ಅಭ್ಯರ್ಥಿಯನ್ನು 4,540 ಮತಗಳಿಂದ ಸೋಲಿಸಿದ್ದರು. ಬಿಜೆಪಿಯ ಮೊದಲ ಶಾಸಕರಾಗಿ ಅವರು ವಿಧಾನಸಭೆ ಪ್ರವೇಶಿಸಿದ್ದರು.

ವೇಲಾಯುಧನ್‌ ಆರ್‌ಎಸ್‌ಎಸ್‌ನಲ್ಲಿ ಗುರುತಿಸಿಕೊಂಡಿದ್ದರು. ಆರ್‌ಎಸ್‌ಎಸ್‌ ಅಂಗಸಂಸ್ಥೆಯಾದ ಸೇವಾ ಭಾರತಿಯಲ್ಲಿ ಅವರು ಕೆಲಸ ಮಾಡಿದ್ದರು. ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ ವೇಲಾಯುಧನ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT