ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಕ್ಫ್‌ ಮಸೂದೆ: ಜೆಸಿಪಿ ಮುಖ್ಯಸ್ಥರಾಗಿ ಜಗದಾಂಬಿಕ ಪಾಲ್‌ ನೇಮಕ

Published : 13 ಆಗಸ್ಟ್ 2024, 12:59 IST
Last Updated : 13 ಆಗಸ್ಟ್ 2024, 12:59 IST
ಫಾಲೋ ಮಾಡಿ
Comments

ನವದೆಹಲಿ: ವಿವಾದಿತ ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲಿಸಲು ರಚಿಸಿರುವ ಸಂಸತ್ತಿನ ಜಂಟಿ ಸಮಿತಿಗೆ ಬಿಜೆಪಿಯ ಹಿರಿಯ ಸಂಸದ ಜಗದಾಂಬಿಕ ಪಾಲ್ ಅವರು ಮುಖ್ಯಸ್ಥರಾಗಲಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪಾಲ್ ಅವರನ್ನು ಜಂಟಿ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿರುವ ಅಧಿಸೂಚನೆ ಶೀಘ್ರವೇ ಪ್ರಕಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ, ಸರ್ಕಾರವು ಈ ಮಸೂದೆಯನ್ನು ಉಭಯ ಸದನಗಳ ಜಂಟಿ ಸಮಿತಿಯ ಪರಿಶೀಲನೆಗೆ ಒಪ್ಪಿಸಲು ನಿರ್ಧರಿಸಿದೆ.

ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸೇರಿ ಜಂಟಿ ಸಮಿತಿಯು 31 ಸದಸ್ಯರನ್ನು ಹೊಂದಿದೆ. ಈ ಸಮಿತಿಯು ಮುಂದಿನ ಅಧಿವೇಶನದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕಳೆದ ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಪ್ರಸ್ತಾವಿತ ಕಾನೂನಿನಡಿ ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದರೆ, ವಿಪಕ್ಷಗಳು ಇದು ಮುಸ್ಲಿಮರನ್ನು ಗುರಿಯಾಗಿಸಿದೆ ಮತ್ತು ಸಂವಿಧಾನದ ಮೇಲಿನ ದಾಳಿ ಎಂದು ಕಿಡಿಕಾರಿದ್ದವು. ತೀವ್ರ ಚರ್ಚೆಯ ನಂತರ ಸಂಸತ್ತಿನ ಜಂಟಿ ಸಮಿತಿಯ ಪರಿಶೀಲನೆಗೆ ಒಪ್ಪಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಸಂಸದೀಯ ವ್ಯವಹಾರಗಳ ಖಾತೆಯನ್ನು ಹೊಂದಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಮಿತಿಗೆ ಸದಸ್ಯರನ್ನು ಹೆಸರಿಸುವ ಸಂಬಂಧ ಮಂಡಿಸಿದ್ದ ಪ್ರಸ್ತಾವನೆಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಶುಕ್ರವಾರ ಅಂಗೀಕರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT