ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಬುಡಕಟ್ಟು ಜನರ ಶೋಷಣೆ: ಕಾಂಗ್ರೆಸ್‌ ಆರೋಪ

Published 14 ಜುಲೈ 2023, 13:58 IST
Last Updated 14 ಜುಲೈ 2023, 13:58 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಅರಣ್ಯ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸುತ್ತಿದೆ ಮತ್ತು ಬಿಜೆಪಿ ರಾಜ್ಯ ಸರ್ಕಾರಗಳು ಬುಡಕಟ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸುವ ಮೂಲಕ ಶೋಷಣೆ ಮಾಡುತ್ತಿವೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಶುಕ್ರವಾರ ಆರೋಪಿಸಿದ್ದಾರೆ.

ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಬುಡಕಟ್ಟು ಜನರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯನ್ನು ಉಲ್ಲೇಖಿಸಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಬುಡಕಟ್ಟು ಜನರ ಮೇಲೆ ಕೊಲೆಯತ್ನದಂತಹ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ ಎಂದೂ ಜೈರಾಮ್‌ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT