ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಸ್ಸಾಂ: ಬಿಜೆಪಿಯ ತೆಲಿ, ದಾಸ್‌ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

Published 26 ಆಗಸ್ಟ್ 2024, 15:17 IST
Last Updated 26 ಆಗಸ್ಟ್ 2024, 15:17 IST
ಅಕ್ಷರ ಗಾತ್ರ

ಗುವಾಹಟಿ: ಬಿಜೆಪಿಯ ರಾಮೇಶ್ವರ್ ತೆಲಿ ಮತ್ತು ಮಿಷನ್‌ ರಂಜನ್‌ ದಾಸ್‌ ಅವರು ಅಸ್ಸಾಂನಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಈ ಹಿಂದೆ ರಾಜ್ಯಸಭೆಯ ಸದಸ್ಯರಾಗಿದ್ದ ಸರ್ಬಾನಂದ ಸೋನೊವಾಲ್ ಮತ್ತು ಕಾಮಾಖ್ಯ ಪ್ರಸಾದ್‌ ತಾಸ ಅವರು ಲೋಕಸಭೆಗೆ ಆಯ್ಕೆಯಾದ ಕಾರಣ ತೆರವಾಗಿದ್ದ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಿತು.

ವಿಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾರಣ ತೆಲಿ ಮತ್ತು ದಾಸ್‌ ಅವರು ಸುಲಭವಾಗಿ ರಾಜ್ಯಸಭೆಯಲ್ಲಿ ಸ್ಥಾನ ಗಿಟ್ಟಿಸಿಕೊಂಡರು.

ರಾಜ್ಯಸಭೆಯಲ್ಲಿ ಅಸ್ಸಾಂನ 7 ಸದಸ್ಯರಿದ್ದು, ಅವರಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 6 ಸ್ಥಾನಗಳನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT