ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳದ ಜನರ ಜೊತೆ ಬಿಜೆಪಿಯ ಚಿಂತನೆ ಹೊಂದಿಕೆಯಾಗುವುದಿಲ್ಲ; ಮಮತಾ

Published 1 ಮೇ 2024, 11:21 IST
Last Updated 1 ಮೇ 2024, 11:21 IST
ಅಕ್ಷರ ಗಾತ್ರ

ಕೋಲ್ಕತ್ತ: ಬಂಗಾಳದ ಜನರ ಜೊತೆ ಬಿಜೆಪಿಯ ಚಿಂತನೆ ಹೊಂದಿಕೆಯಾಗುವುದಿಲ್ಲ ಎಂದು ಟಿಎಂಸಿ ನಾಯಕಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಬಿಜೆಪಿ ನಾಯಕರನ್ನು ‘ವಲಸೆ ಹಕ್ಕಿಗಳು‘ ಎಂದು ಕರೆದಿದ್ದಾರೆ.

ಬಂಗಾಳ ಮತ್ತು ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆಯಿಲ್ಲ. ಏಕೆಂದರೆ ನಮ್ಮ ರಾಜ್ಯದ ಸಂಸ್ಕೃತಿ ಹಾಗೂ ಸಾಂಪ್ರದಾಯವನ್ನು ಅನುಸರಿಸುತ್ತಿರುವಾಗ ದೆಹಲಿಯಿಂದ ಬಂದ ವಲಸೆ ಹಕ್ಕಿಗಳು ( ಬಿಜೆಪಿ) ನಮ್ಮ ಬಗ್ಗೆ ಸುಳ್ಳು ಸುದ್ದಿಗಳನ್ನು ಇಲ್ಲಿ ಪಸರಿಸುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಲೋಕಸಭಾ ಚುನಾವಣೆಯು ಬಿಜೆಪಿಯವರ ಭವಿಷ್ಯವನ್ನು ನಿರ್ಧರಿಸುತ್ತದೆ ಹಾಗೂ ಅವರ ಪಿತೂರಿಗಳಿಗೆ ಶಿಕ್ಷೆ ನೀಡುತ್ತದೆ ಎಂದು ಮಮತಾ ತಿಳಿಸಿದ್ದಾರೆ.

ಚುನಾವಣಾ ರ್‍ಯಾಲಿಗಳ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಹಣವನ್ನು ನೀಡಿಲ್ಲ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT