ಅಮರಾವತಿ: ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಬಿಜೆವೈಎಂ ಕಾರ್ಯಕರ್ತರು ಮಾಜಿ ಸಿಎಂ, ವೈಎಸ್‌ಆರ್‌ಸಿಪಿ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ.
ತಾಡೆಪಲ್ಲಿಯಲ್ಲಿರುವ ಜಗನ್ ನಿವಾಸದ ಎದುರು ಧರಣಿ ಕುಳಿತ ಕಾರ್ಯಕರ್ತರು, ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.