ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಫೋಟ; ಯಾವುದೇ ಪ್ರಾಣ ಹಾನಿ ಇಲ್ಲ– ವರದಿ

Published 27 ಮಾರ್ಚ್ 2024, 2:25 IST
Last Updated 27 ಮಾರ್ಚ್ 2024, 2:25 IST
ಅಕ್ಷರ ಗಾತ್ರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸ್ಫೋಟ ಸಂಭವಿಸಿದೆ. ಆದರೆ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್‌ನ ಜಿಲ್ಲಾ ಆಸ್ಪತ್ರೆಯ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ವೇಳೆ ಅಲ್ಲಿನ ಸ್ಥಳೀಯರು ಕೆಲ ಕಾಲ ಆತಂಕದಲ್ಲಿದ್ದರು.

ಸ್ಥಳಕ್ಕೆ ಪೊಲೀಸರು, ಸೇನಾ ಸಿಬ್ಬಂದಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಧಾವಿಸಿದ್ದಾರೆ. ಶಂಕಿತ ಭಯೋತ್ಪಾದಕರು ಗ್ರೆನೇಡ್ ಎಸೆತದಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ಥಳದಲ್ಲಿ ಭದ್ರತಾ ಪಡೆ ಬೀಡುಬಿಟ್ಟಿದ್ದು, ಹಿರಿಯ ಅಧಿಕಾರಿಗಳೂ ಅಲ್ಲಿಯೇ ಇದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT