ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ; ಸಾಕ್ಷಿಗಳ ಹೇಳಿಕೆ ದಾಖಲಿಸಿದ ದೆಹಲಿ ಪೊಲೀಸ್

Published 29 ಡಿಸೆಂಬರ್ 2023, 5:00 IST
Last Updated 29 ಡಿಸೆಂಬರ್ 2023, 5:00 IST
ಅಕ್ಷರ ಗಾತ್ರ

ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು, ಸಾಕ್ಷಿಗಳ ಹೇಳಿಕೆಯನ್ನು ಗುರುವಾರ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸುವ ಕೆಲಹೊತ್ತಿಗೂ ಮುನ್ನ ಘಟನಾ ಸ್ಥಳದಲ್ಲಿ ಓಡಾಡುತ್ತಿದ್ದ ವ್ಯಕ್ತಿಗಳ ಪಟ್ಟಿಯನ್ನು ಸಿಸಿಟಿವಿ ದೃಶ್ಯಗಳ ನೆರವಿನಿಂದ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಶಬ್ದ ಕೇಳಿಸಿಕೊಂಡಿದ್ದಾಗಿ ಮತ್ತು ಹೊಗೆ ಆವರಿಸಿದ್ದನ್ನು ನೋಡಿದ್ದಾಗಿ ಹೇಳಿರುವ ಒಟ್ಟು 10 ಜನರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.

ಘಟನಾ ಸ್ಥಳದ ಸಮೀಪ ಸಕ್ರಿಯವಾಗಿದ್ದ ಮೊಬೈಲ್‌ ಫೋನ್‌ಗಳು ಹಾಗೂ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಹಲವರನ್ನು ಗುರುತಿಸಲಾಗಿದೆ. ಆ ಪೈಕಿ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮತ್ತು ದೆಹಲಿ ಪೊಲೀಸ್‌ ಇಲಾಖೆಯ ವಿಧಿವಿಜ್ಞಾನ ತಜ್ಞರು ಸ್ಫೋಟದ ಸ್ಥಳದಲ್ಲಿ ದೊರೆತ ಕೆಲ ವಸ್ತುಗಳು ಮತ್ತು ಮಣ್ಣಿನ ಮಾದರಿ ಸಂಗ್ರಹಿಸಿದ್ದಾರೆ. ಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ. ಅದಾದ ನಂತರ ಸ್ಫೋಟಕಗಳ ಬಗ್ಗೆ ಖಚಿತ ಮಾಹಿತಿ ಸಿಗಲಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT