ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್

Published 30 ಡಿಸೆಂಬರ್ 2023, 3:38 IST
Last Updated 30 ಡಿಸೆಂಬರ್ 2023, 3:38 IST
ಅಕ್ಷರ ಗಾತ್ರ

ನವದೆಹಲಿ: ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ (ಜೀವ ಅಥವಾ ಆಸ್ತಿಗೆ ಹಾನಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಮಂಗಳವಾರ(ಡಿ.26) ಸಂಜೆ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಸಾಕ್ಷಿಗಳ ಹೇಳಿಕೆ ದಾಖಲು:

ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು, ಸಾಕ್ಷಿಗಳ ಹೇಳಿಕೆಯನ್ನು ಗುರುವಾರ ದಾಖಲಿಸಿಕೊಂಡಿದ್ದಾರೆ. ಸ್ಫೋಟ ಸಂಭವಿಸುವ ಕೆಲಹೊತ್ತಿಗೂ ಮುನ್ನ ಘಟನಾ ಸ್ಥಳದಲ್ಲಿ ಓಡಾಡುತ್ತಿದ್ದ ವ್ಯಕ್ತಿಗಳ ಪಟ್ಟಿಯನ್ನು ಸಿಸಿಟಿವಿ ದೃಶ್ಯಗಳ ನೆರವಿನಿಂದ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದ ಕೇಳಿಸಿಕೊಂಡಿದ್ದಾಗಿ ಮತ್ತು ಹೊಗೆ ಆವರಿಸಿದ್ದನ್ನು ನೋಡಿದ್ದಾಗಿ ಹೇಳಿರುವ ಒಟ್ಟು 10 ಜನರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT