ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೇಬಿಯಸ್ ಕಾರ್ಪಸ್ ಅರ್ಜಿ: ಪ್ರತಿಕ್ರಿಯೆ ಸಲ್ಲಿಸಲು ಬಾಂಬೆ ಹೈಕೋರ್ಟ್ ಸೂಚನೆ

Published : 21 ಆಗಸ್ಟ್ 2024, 13:56 IST
Last Updated : 21 ಆಗಸ್ಟ್ 2024, 13:56 IST
ಫಾಲೋ ಮಾಡಿ
Comments

ಮುಂಬೈ: ಮುಂಬೈನ ವರ್ಲಿಯಲ್ಲಿ ಸಂಭವಿಸಿದ್ದ ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಬುಧವಾರ ಪೊಲೀಸರಿಗೆ ಸೂಚಿಸಿದೆ.

‘ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ. ತಕ್ಷಣವೇ ಬಂಧಮುಕ್ತಗೊಳಿಸಬೇಕು’ ಎಂದು ಕೋರಿ ಶಾ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮಿಹಿರ್‌ ಶಾ ಬಿಎಂಡಬ್ಲ್ಯು ಕಾರನ್ನು ಮುಂಬೈನ ವರ್ಲಿ ಪ್ರದೇಶದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು, ಅದರಲ್ಲಿ ಸಾಗುತ್ತಿದ್ದ ಕಾವೇರಿ ನಖ್ವಾ ಎನ್ನುವವರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿದ್ದಾರೆ. ಈ ಅಪಘಾತ ಸಂಭವಿಸಿದ ಎರಡು ದಿನದ ನಂತರ ಅವರನ್ನು ಬಂಧಿಸಲಾಗಿದೆ. ತಮ್ಮ ಕಾರು ಚಾಲಕ ರಾಜಋಷಿ ಬಿದಾವತ್‌ನೊಂದಿಗೆ ಈಗಲೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನ್ಯಾಯಮೂರ್ತಿಗಳಾದ ಭಾರತಿ ಡಾಂಗರೆ ಮತ್ತು ಮಂಜುಷಾ ದೇಶಪಾಂಡೆ ಅವರನ್ನೊಳಗೊಂಡ ವಿಭಾಗೀಯ ಪೀಠವು ಆರೋಪಿಗಳಿಬ್ಬರೂ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್‌ನ ವಿಚಾರಣೆ ಕೈಗೆತ್ತಿಕೊಂಡಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಮೂಲಕ ಪ್ರತಿಕ್ರಿಯೆ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ ವಿಭಾಗೀಯ ಪೀಠವು, ವಿಚಾರಣೆಯನ್ನು ಆ.29ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT