ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ನದಿಯಲ್ಲಿ ದೋಣಿ ಮುಳುಗಿ ಆರು ಜನ ಸಾವು; ಹಲವರು ನಾಪತ್ತೆ

Published 16 ಏಪ್ರಿಲ್ 2024, 4:31 IST
Last Updated 16 ಏಪ್ರಿಲ್ 2024, 4:31 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ದೋಣಿ ಮುಳುಗಿದ್ದು, ಆರು ಮಂದಿ ಮೃತಪಟ್ಟಿದ್ದು ಕೆಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ 7 ಅಪ್ರಾಪ್ತರು ಮತ್ತು 8 ವಯಸ್ಕರು ಸೇರಿದಂತೆ 15 ಜನರಿದ್ದರು. 3 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 3 ಜನ ಸುರಕ್ಷಿತವಾಗಿದ್ದು ಮನೆಗೆ ಕಳುಹಿಸಲಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸೇನಾ ತಂಡಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ಮುಂದರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಝೀಲಂ ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT