ಗುವಾಹಟಿ: ಅಸ್ಸಾಂನಲ್ಲಿ ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಗಾಗಿ (ಬಿಟಿಸಿ) ಸೋಮವಾರ ಬೆಳಿಗ್ಗೆ ಮತದಾನ ಆರಂಭವಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬಕ್ಸಾ ಮತ್ತು ಉದಲ್‌ಗುರಿ ಜಿಲ್ಲೆಯ 40 ಸ್ಥಾನಗಳ ಪೈಕಿ 21 ಸ್ಥಾನಗಳಿಗಾಗಿ ಚುನಾವಣೆ ನಡೆಯುತ್ತಿದೆ. ಸೋಮವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕೋಕ್ರಜಾರ್ ಮತ್ತು ಚಿರಂಗ್ ಜಿಲ್ಲೆಯ ಇತರ 19 ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ.

ಮುಂದಿನ ವರ್ಷ ನಡೆಯಲಿರುವ ಅಸ್ಸಾಂ ವಿಧಾನಸಭೆ ಚುನಾವಣೆ ದೃಷಿಯಿಂದ ಬಿಟಿಸಿ ಚುನಾವಣೆಯು ಮಹತ್ವದಾಗಿದ್ದು, ಚುನಾವಣಾ ಫಲಿತಾಂಶ ಡಿಸೆಂಬರ್ 12 ರಂದು ಹೊರಬೀಳಲಿದೆ.

ಬಿಜೆಪಿ ಈ ಬಾರಿಯ ಬಿಟಿಸಿ ಚುನಾವಣೆಯಲ್ಲಿ ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ವಿರುದ್ಧವೇ ಸ್ಪರ್ಧಿಸುತ್ತಿದೆ. ರಾಜ್ಯಮಟ್ಟದಲ್ಲಿ ಬಿಪಿಎಫ್ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಆದರೆ, ಬಿಟಿಸಿ ಚುನಾವಣೆ ಬಳಿಕ ಈ ಮೈತ್ರಿ ಮುರಿದು ಬೀಳುವ ಸಾಧ್ಯತೆ ಇದೆ. ಈಗಾಗಲೇ ಇನ್ನೊಂದು ಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಜತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮಾತುಕತೆ ನಡೆಸಿದೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.