ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ಶವ; ಮಹಾರಾಷ್ಟ್ರದಲ್ಲಿ FIR

Published 16 ಆಗಸ್ಟ್ 2024, 6:04 IST
Last Updated 16 ಆಗಸ್ಟ್ 2024, 6:04 IST
ಅಕ್ಷರ ಗಾತ್ರ

ಥಾಣೆ: ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ವೃದ್ಧರೊಬ್ಬರ ಶವ ಪತ್ತೆಯಾಗಿದ್ದು, ಈ ಸಂಬಂಧ ಥಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಕಲ್ಯಾಣ್‌ ತಾಲ್ಲೂಕಿನ ವರಾಪ್‌ ಗ್ರಾಮದ ಸಮೀಪ ಗುರುವಾರ ಸೂಟ್‌ಕೇಸ್‌ ಪತ್ತೆಯಾಗಿತ್ತು.

ವ್ಯಕ್ತಿಯೊಬ್ಬರು ಸೂಟ್‌ಕೇಸ್‌ ಬಿದ್ದಿರುವುದನ್ನು ಗಮನಿಸಿದ್ದರು. ಕುತೂಹಲಕ್ಕೆ ಅದನ್ನು ತೆರೆದು ನೋಡಿದಾಗ 60–70 ವಯೋಮಾನದ ವ್ಯಕ್ತಿಯ ಶವ ಅದರಲ್ಲಿ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಶ್ವಾನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT