ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮೇಲೆ ದಾಳಿ ನಡೆದು ಸುಮಾರು 30 ಗಂಟೆಗಳು ಕಳೆದ ನಂತರ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ಬಾಂದ್ರಾ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದ್ದಾರೆ.

ಬಾಂದ್ರಾದಲ್ಲಿರುವ ಮನೆಯಲ್ಲಿ ಗುರುವಾರ ಮುಂಜಾನೆ ಸೈಫ್ ಅವರ ಮೇಲೆ ದಾಳಿ ನಡೆದಿದೆ.

ಘಟನೆ ನಡೆದಾಗ, ಆ ಪ್ರದೇಶದಲ್ಲಿ ಎಷ್ಟು ಮೊಬೈಲ್ಗಳು ಸಕ್ರಿಯವಾಗಿದ್ದವು ಎಂಬುದೂ ಸೇರಿದಂತೆ, ತಾಂತ್ರಿಕ ಮಾಹಿತಿಯನ್ನು ಅಪರಾಧ ವಿಭಾಗ ಮತ್ತು ಸ್ಥಳೀಯ ಪೊಲೀಸರು ಕಲೆಹಾಕುತ್ತಿದ್ದಾರೆ. ದಾಳಿಕೋರನನ್ನು ಪತ್ತೆ ಹಚ್ಚಲು 20 ತಂಡಗಳನ್ನು ರಚಿಸಲಾಗಿದೆ. ಆತ ಅಪರಾಧದ ಹಿನ್ನೆಲೆ ಹೊಂದಿದ್ದಾನೆಯೇ ಎಂಬ ಬಗ್ಗೆಯೂ ಶೋಧಿಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

'ಸದ್ಗುರು ಶರಣ್' ಅಪಾರ್ಟ್ಮೆಂಟ್ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಕಿಡಿಗೇಡಿ, ಚಾಕುವಿನಿಂದ ಹಲವು ಸಲ ಇರಿದಿದ್ದ. ಆತ ದೊಣ್ಣೆ ಹಾಗೂ ಹರಿತವಾದ ಆಯುಧದೊಂದಿಗೆ ಪರಾರಿಯಾಗುತ್ತಿರುವ ದೃಶ್ಯಗಳು ಕಟ್ಟಡದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
.ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ದುಷ್ಕರ್ಮಿ: ಆಸ್ಪತ್ರೆಗೆ ದಾಖಲು.ಪತಿ ಸೈಫ್ ಮೇಲಿನ ದಾಳಿ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಪ್ರತಿಕ್ರಿಯಿಸಿದ ಕರೀನಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.