ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಪೋಟ: ಬಾಲಕ ಸಾವು

Published 6 ಮೇ 2024, 7:11 IST
Last Updated 6 ಮೇ 2024, 7:11 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಹೂಘ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಪೋಟಿಸಲಾಗಿದ್ದು, ಓರ್ವ ಬಾಲಕ ಮೃತಪಟ್ಟಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಹೂಘ್ಲಿ ಜಿಲ್ಲೆಯ ಪಂಡುವಾದಲ್ಲಿ ಕೊಳದ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಆರೋಗ್ಯ ಕೇಂದ್ರಗಳಿಗೆ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಸಂಸದೆ ಲಾಕೆಟ್ ಚಟರ್ಜಿ ಸ್ಫೋಟದಲ್ಲಿ ಟಿಎಂಸಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಪಂಡುವಾದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸಮಾವೇಶಕ್ಕೂ ಮುನ್ನ ಜನರಲ್ಲಿ ಭಯ ಹುಟ್ಟಿಸಲು ಈ ಸ್ಫೋಟ ನಡೆಸಲಾಗಿದೆ ಎಂದು ಅವರು ಟೀಕಿಸಿದ್ದಾರೆ.

ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಪಕ್ಷದಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಪಂಡುವಾದಲ್ಲಿ ಅವರು ಇವತ್ತು ಪ್ರಚಾರ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT