ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಹುಸಿ ಬಾಂಬ್ ಕರೆ

Published 18 ಜೂನ್ 2024, 5:55 IST
Last Updated 18 ಜೂನ್ 2024, 5:55 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದ ಹಿನ್ನೆಲೆಯಲ್ಲಿ ತೀವ್ರ ತಪಾಸಣೆಗೆ ಒಳಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಿಂದ ದುಬೈಗೆ ತೆರಳುತ್ತಿರುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ವಿಮಾನ ನಿಲ್ದಾಣದ ಕಚೇರಿಗೆ ಇಮೇಲ್ ಬಂದಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ, ವಿಮಾನವನ್ನು ಸಂಪೂರ್ಣ ತಪಾಸಣೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ದೆಹಲಿಯ ಶಾಲೆಗಳು, ಮ್ಯೂಸಿಯಂಗಳು, ವೈದ್ಯಕೀಯ ಸಂಸ್ಥೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬರುತ್ತಿವೆ. ಆದರೆ, ಎಲ್ಲಿಯೂ ಸಹ ಬಾಂಬ್‌ಗಳು ಪತ್ತೆಯಾಗಿಲ್ಲ.

ಜೂನ್ 12ರಂದು ಕರ್ತವ್ಯ ಪಥದಲ್ಲಿರುವ ರಾಷ್ಟ್ರೀಯ ವಸ್ತುಸಂಗ್ರಹಾಲಯ, ಚಾಣಕ್ಯಪುರಿಯಲ್ಲಿರುವ ರೈಲ್ ಮ್ಯೂಸಿಯಂ, ದರಿಯಾಗಂಜ್‌ನ ಗಾಂಧಿ ಮ್ಯೂಸಿಯಂ ಆವರಣದಲ್ಲಿ ಮತ್ತು ಮಾನಸಿಕ ಆರೋಗ್ಯ ಚಿಕಿತ್ಸಾ ಸಂಸ್ಥೆಗಳಾದ ಐಎಚ್‌ಬಿಎಎಸ್ ಹಾಗೂ ವಿಮ್ಹಾನ್ಸ್‌ ಸಂಸ್ಥೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿತ್ತು.

ಏಪ್ರಿಲ್ 30ರಂದು ಚಾಚಾ ನೆಹರೂ ಆಸ್ಪತ್ರೆಗೂ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಮೇ 1ರಂದು ರಷ್ಯಾ ಮೂಲದ ಇಮೇಲ್‌ನಿಂದ ದೆಹಲಿ 150 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಈ ಎಲ್ಲ ಕಡೆ ಪರಿಶೀಲನೆ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT