ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎಂಎ ಸ್ಟೇಡಿಯಂನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ತೀವ್ರ ಶೋಧ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಸಮಾರಂಭ ಆರಂಭವಾಗುವುದಕ್ಕೂ ಮೊದಲು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಸ್ಫೋಟಕ ವಸ್ತುಗಳು ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢವಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜಮ್ಮುವಿನ ಎಂ.ಎ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.