ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bomb Threat: ಪಶ್ಚಿಮ ಬಂಗಾಳದ ರಾಜಭವನ, ದೆಹಲಿಯ 5 ಶಾಲೆಗಳಿಗೆ ಬಾಂಬ್ ಬೆದರಿಕೆ

Published 1 ಮೇ 2024, 3:17 IST
Last Updated 1 ಮೇ 2024, 3:17 IST
ಅಕ್ಷರ ಗಾತ್ರ

ನವದೆಹಲಿ/ಕೋಲ್ಕತ್ತ: ದೆಹಲಿಯ 5 ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

ಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿದ್ದು, ನಾವು ಟೆರರೂಸರ್ಸ್​ ಎಂಬ ಭಯೋತ್ಪಾದಕ ಗುಂಪಿಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ.

ರಾಜಭವನ ಕಟ್ಟಡದ ಒಳಗೆ ಸ್ಫೋಟಕ ಸಾಮಗ್ರಿ ಇರಿಸಿದ್ದೇವೆ. ಅಲ್ಲಿರುವ ಅನೇಕರು ಸಾಯುತ್ತಾರೆ ಎಂದು ಅವರು ಕರೆ ಮಾಡಿದ್ದಾರೆ. ಆದರೆ ಪಶ್ಚಿಮ ಬಂಗಾಳ ಪೊಲೀಸರು ಇದೊಂದು ಹುಸಿ ಕರೆ ಎಂದಿದ್ದಾರೆ. ಕರೆ ಮಾಡಿದವರ ಬಗ್ಗೆ ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೂರ್ವ ದೆಹಲಿಯ ಮಯೂರ ವಿಹಾರದಲ್ಲಿರುವ ಮದರ್ ಮೇರಿ ಶಾಲೆ ಸೇರಿ ಐದು ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ.

ಈ ಘಟನೆ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT