ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾಧಿಕಾರಿ ಕಚೇರಿ ಮೇಲೆ ಬಾಂಬ್ ದಾಳಿ ಮಾಡುವುದಾಗಿ ದುಷ್ಕರ್ಮಿಗಳು ಮಂಗಳವಾರ ಇ–ಮೇಲ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಮುಂಜಾಗ್ರತ ಕ್ರಮವಾಗಿ ಪೊಲೀಸರು ತಕ್ಷಣವೇ ಸ್ಥಳವನ್ನು ತೆರವುಗೊಳಿಸಿದರು ಎಂದರು.

ಜಿಲ್ಲಾಧಿಕಾರಿಗಳ ಅಧಿಕೃತ ಇ–ಮೇಲ್ ಖಾತೆಗೆ ಮುಂಜಾನೆ 6.23ಕ್ಕೆ ಬಂದಿರುವ ಮೇಲ್ನಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರ್ಡಿಎಕ್ಸ್ ಸ್ಫೋಟಕವನ್ನು ಅಳವಡಿಸಿದ್ದು, ಮಧ್ಯಾಹ್ನ 3.30ರ ವೇಳೆಗೆ ಸ್ಪೋಟಗೊಳ್ಳಲಿದೆ ಎಂದಿದೆ ಎಂದು ತಿಳಿಸಿದರು.

ಮಾಹಿತಿ ತಿಳಿದ ತಕ್ಷಣವೇ, ಡಿಸಿಪಿ ಬಾಲಸಾಹೇಬ್ ಪಾಟೀಲ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ. ಇದುವರೆಗೂ ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ, ಸ್ಥಳ ಪರಿಶೀಲನೆ ನಡೆಯುತ್ತಿದೆ. ಮುಂಜಾಗ್ರತ ಕ್ರಮವಾಗಿ ಕ್ಯೂಟಿಆರ್ ದಳವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.