ತಿರುವನಂತಪುರಂ(ಕೇರಳ): ಬಾಂಬ್ ಬೆದರಿಕೆ ಕರೆ ಹಿನ್ನೆಲೆ ಪೊಲೀಸರು ಗುರುವಾರ ಕೇರಳ ರಾಜ್ಯ ಸಚಿವಾಲಯ ಮತ್ತು ಆಡಳಿತ ಸಂಕೀರ್ಣದಲ್ಲಿ ತೀವ್ರ ಶೋಧ ನಡೆಸಿದ್ದಾರೆ.
ಮೂಲಗಳ ಪ್ರಕಾರ, ಇಂದು ಬೆಳಗ್ಗೆ 11 ಗಂಟೆಗೆ ಸಚಿವಾಲಯದ ಸಂಕೀರರ್ಣದಲ್ಲಿ ಬಾಂಬ್ ಸ್ಪೋಟಿಸುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಚಿವಾಲಯದ ಆವರಣದ ಒಳಗೆ, ಹೊರಗೆ ಹಾಗೂ ಸುತ್ತಮುತ್ತ ನಿಲ್ಲಿಸಿದ ವಾಹನಗಳು ಮತ್ತು ಹತ್ತಿರದ ಅಂಗಡಿಗಳಲ್ಲಿ ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.