ಮುಂಬೈ: ಆಗಸ್ಟ್ 27ರಿಂದ ಆಚರಿಸಲಾಗುವ 10 ದಿನಗಳ ಗಣೇಶ ಉತ್ಸವದಲ್ಲಿ ಪ್ರತಿಷ್ಠಾಪಿಸುವ ಆರು ಅಡಿ ಎತ್ತರದವರೆಗಿನ ಎಲ್ಲಾ ಮಾದರಿಯ ಗಣೇಶ ಮೂರ್ತಿಗಳನ್ನು ಕೃತಕ ತೊಟ್ಟಿಗಳಲ್ಲೇ ವಿಸರ್ಜಿಸಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ವಿಗ್ರಹಗಳಿಗೆ ಸಂಬಂಧಿಸಿದಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಪರಿಷ್ಕೃತ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಸಂದೀಪ್ ಮಾರ್ನೆ ನೇತೃತ್ವದ ನ್ಯಾಯಪೀಠವು ಈ ತೀರ್ಪು ನೀಡಿದೆ.

‘ಮೂರ್ತಿಗಳ ವಿಸರ್ಜನೆಯಿಂದ ಪರಿಸರದ ಮೇಲೆ ಆಗುವಂತಹ ದುಷ್ಪರಿಣಾಮಗಳನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದ 6 ಅಡಿ ಎತ್ತರದವರೆಗಿನ ಎಲ್ಲಾ ವಿಗ್ರಹಗಳನ್ನು ಕೃತಕ ನೀರಿನ ತೊಟ್ಟಿಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು’ ಎಂದೂ ನ್ಯಾಯಪೀಠ ಹೇಳಿದೆ.

ಪಿಒಪಿ ಗಣೇಶ ಮೂರ್ತಿಗಳು ಸೇರಿದಂತೆ ವಿವಿಧ ದೇವತೆಗಳ ಮೂರ್ತಿಗಳನ್ನು ವಿಸರ್ಜಿಸುವ ಅಗತ್ಯವಿರುವ ಹಬ್ಬಗಳಿಗೂ ಅನ್ವಯವಾಗುವಂತೆ ಈ ಆದೇಶವು ಮುಂದಿನ ವರ್ಷದ (2026) ಮಾರ್ಚ್ವರೆಗೆ ಜಾರಿಯಲ್ಲಿರುತ್ತದೆ ಎಂದು ಕೋರ್ಟ್ ತಿಳಿಸಿದೆ.

ಸ್ಥಳೀಯ ಸಂಸ್ಥೆಗಳು ಆರು ಅಡಿ ಎತ್ತರದವರೆಗಿನ ಗಣೇಶ ಮೂರ್ತಿಗಳನ್ನು ಕೃತಕ ನೀರಿನ ತೊಟ್ಟಿಗಳಲ್ಲಿ ವಿಸರ್ಜಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಜತೆಗೆ, ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಬಗ್ಗೆ ತನ್ನ ನೀತಿಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಗಣೇಶ ಮೂರ್ತಿಗಳನ್ನು ತಯಾರಿಸಲು ಬಳಸುವ ಪಿಒಪಿ ವಸ್ತುಗಳನ್ನು ಮರುಬಳಕೆ ಮಾಡುವ ಕ್ರಮಗಳನ್ನು ಸೂಚಿಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಹೈಕೋರ್ಟ್ ಸರ್ಕಾರ ನಿರ್ದೇಶನ ನೀಡಿದೆ. ಜತೆಗೆ, ಪರಿಸರ ಸ್ನೇಹಿ ರೀತಿಯಲ್ಲಿ ವಿಗ್ರಹಗಳನ್ನು ವಿಸರ್ಜಿಸಲು ಸಾಧ್ಯವಾಗುವಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಕೋರ್ಟ್ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.