ಮುಂಬೈ: 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಫಾಹೀಂ ಅನ್ಸಾರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ (ಪಿಸಿಸಿ) ನೀಡದಿರಲು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾರಣ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ಜೀವನೋಪಾಯಕ್ಕಾಗಿ ತಾನು ಆಟೊ ಚಾಲನೆ ಮಾಡಲು ಬಯಸಿದ್ದು, ಇದಕ್ಕೆ ಅಗತ್ಯವಾಗಿರುವ ಪೊಲೀಸ್
ಪಿಸಿಸಿ ನೀಡಲು ಆಡಳಿತವು ತಿರಸ್ಕರಿಸಿದ್ದು, ಅದನ್ನು ನೀಡುವಂತೆ ಕೋರಿ ಅನ್ಸಾರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು.

ಇದೀಗ ಹೈಕೋರ್ಟ್ನ ಆದೇಶ ಪ್ರತಿ ಲಭ್ಯವಾಗಿದ್ದು, ಅರ್ಜಿ ತಿರಸ್ಕಾರಕ್ಕೆ ಕಾರಣಗಳೂ ತಿಳಿದುಬಂದಿವೆ.

‘ಸಾಕ್ಷ್ಯಾಧಾರ ಕೊರತೆಗಳಿಂದ ಅನ್ಸಾರಿ ಖುಲಾಸೆಯಾಗಿದ್ದಾರೆ. ಆದರೂ ಅದೇ ಮಾದರಿಯ ಚಟುವಟಿಕೆಗಳಲ್ಲಿ ಅವರು ತೊಡಗಿಕೊಂಡಿದ್ದಾರೆ ಎಂಬುದನ್ನು ತಳ್ಳಿಹಾಕಲಾಗದು ಎಂದು ಗುಪ್ತಚರ ಸಂಸ್ಥೆಗಳು ನೀಡಿರುವ ವರದಿಯನ್ನು ನ್ಯಾಯಾಲಯ ಪರಿಗಣಿಸಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಣಯವನ್ನು ತಪ್ಪು ಎನ್ನಲು ಸಾಧ್ಯವಿಲ್ಲ’ ಎಂದೂ ನ್ಯಾಯಪೀಠ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.