ನವದೆಹಲಿ:ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಘಟನೆಯಲ್ಲಿ ರೈತರ ಸಾವಿಗೆ ಕಾರಣದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಆಗ್ರಹಿಸಿದ್ದಾರೆ.

ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳಬೇಕು. ಮೃತ ರೈತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

‘ಇದೊಂದು ಹೃದಯವಿದ್ರಾವಕ ಘಟನೆ‘ ಎಂದು ಬಣ್ಣಿಸಿರುವ ಅವರು, ಈ ಘಟನೆ ದೇಶದ ಜನರಲ್ಲಿ ನೋವುಂಟು ಮಾಡುವ ಜೊತೆಗೆ ಆಕ್ರೋಶಗೊಳ್ಳುವಂತೆ ಮಾಡಿದೆ ಎಂದು ಹೇಳಿದ್ದಾರೆ.

ರೈತರು ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಪ್ರಜಾಪ್ರಭುತ್ವ ನೀಡಿರುವ ಹಕ್ಕುಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡಿರುವವರೆಲ್ಲ ನಮ್ಮ ರೈತ ಸಹೋದರರು, ನಮ್ಮ ದೇಶದ ಪ್ರಜೆಗಳು‘ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಪ್ರತಿಭಟನಾ ನಿರತ ರೈತರೊಂದಿಗೆ ಸಂಯಮ ಮತ್ತು ತಾಳ್ಮೆಯಿಂದ ವ್ಯವಹರಿಸಬೇಕು. ಎಂಥದ್ದೇ ಸಂದರ್ಭದಲ್ಲಾದರೂ ರೈತರೊಂದಿಗೆ ಸಂವೇದನೆಯಿಂದ ವರ್ತಿಸಬೇಕು. ಹಾಗೆಯೇ, ಗಾಂಧಿ ತತ್ವ ಮತ್ತು ಪ್ರಜಾಪ್ರಭುತ್ವದ ಮಾರ್ಗವನ್ನೇ ಅನುಸರಿಸಬೇಕು‘ ಎಂದು ವರುಣ್ ಗಾಂಧಿ ಹೇಳಿದ್ದಾರೆ.

ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಮಾಡಬೇಕು. ಶಂಕಿತರನ್ನು ಗುರುತಿಸಿ ವಿಚಾರಣೆ ನಡೆಸಬೇಕು. ಆರೋಪಿಗಳ ವಿರುದ್ಧ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು‘ ಎಂದು ಅವರು ಮನವಿ ಮಾಡಿದ್ದಾರೆ.

‘ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಮೂಲಕ ಕಾಲಮಿತಿಯಲ್ಲಿ ಈ ಪ್ರಕರಣದ ತನಿಖೆ ನಡೆಸುವುದು ಹೆಚ್ಚು ಸೂಕ್ತ‘ ಎಂದು ವರುಣ್ ಗಾಂಧಿ ಹೇಳಿದ್ದಾರೆ.

ಇವನ್ನೂ ಓದಿ
*ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಹರಿದ ವಾಹನ: 8 ಬಲಿ
*ಛತ್ತೀಸ್ಗಡ ಸಿಎಂ, ಪಂಜಾಬ್ ಉಪಮುಖ್ಯಮಂತ್ರಿ ಭೇಟಿ ತಡೆಗೆ ಉ. ಪ್ರದೇಶ ಸರ್ಕಾರ ಮನವಿ
*ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ, ಇತರ 14 ಮಂದಿ ವಿರುದ್ಧ ಪ್ರಕರಣ?
*ಲಖಿಂಪುರ–ಖೇರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ, ಪೊಲೀಸರ ವಿರುದ್ಧ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.