ಅಮರಾವತಿ: ತಿರುಪತಿಯಲ್ಲಿ ಇತ್ತೀಚಿಗಷ್ಟೇ ಸಂಭವಿಸಿದ್ದ ಕಾಲ್ತುಳಿತ ದುರಂತ ಮಾಸುವ ಮುನ್ನವೇ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಮಂಡಳಿಯ ಅತಿಥಿಗೃಹದಲ್ಲಿ ಮೂರು ವರ್ಷದ ಬಾಲಕನೊಬ್ಬ ಮೆಟ್ಟಿಲು ಮೇಲಿಂದ ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪೋಷಕರೊಂದಿಗೆ ವೆಂಕಟೇಶ್ವರ ಸ್ವಾಮಿ ದೇವರ ದರ್ಶನಕ್ಕಾಗಿ ಬಂದಿದ್ದ ಬಾಲಕ ಪದ್ಮನಾಭ ನಿಲಯದ ಮೊದಲ ಮಹಡಿಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾನೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕುಟುಂಬಸ್ಥರು ಗುರುವಾರ ಸಂಜೆ ದೇವರ ದರ್ಶನಕ್ಕೆ ಕಾಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಈಚೆಗೆ ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ದೇವರ ದರ್ಶನ ಪಡೆಯುವುದಕ್ಕಾಗಿ ಟಿಟಿಡಿ ವಿತರಿಸುವ ಕೂಪನ್ ಪಡೆಯುವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ ಐವರು ಮಹಿಳೆಯರು ಸೇರಿ 6 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.