ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲ್ಡೀವ್ಸ್‌ ಸಚಿವೆಯ ಹೇಳಿಕೆಗೆ ವಿರೋಧ: ಟ್ರೆಂಡ್ ಆಯ್ತು ಹ್ಯಾಶ್‌ ಟ್ಯಾಗ್‌

Published 7 ಜನವರಿ 2024, 12:34 IST
Last Updated 7 ಜನವರಿ 2024, 12:34 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ಮೋದಿ ಅವರ ಲಕ್ಷದ್ವೀಪ ಭೇಟಿಯ ಕುರಿತಂತೆ ಮಾಲ್ಡೀವ್ಸ್‌ ಸಚಿವೆ ಮರಿಯಮ್‌ ಶಿಯುನಾ ಅವರ ಹೇಳಿಕೆ ಇದೀಗ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ಹದಗೆಡಿಸಿದೆ. ಇದರ ನಡುವೆಯೇ #boycottmaldives ಹ್ಯಾಶ್‌ ಟ್ಯಾಗ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಮೋದಿ ಅವರು ಅಲ್ಲಿನ ಕಳೆದ ಕ್ಷಣಗಳ ವಿಡಿಯೊ ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಈ ಭೇಟಿಯ ಕುರಿತಂತೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದ ಸಚಿವೆ ಮರಿಯಮ್‌ ಶಿಯುನಾ ಅವರು ಪ್ರಧಾನಿ ಮೋದಿ ಮತ್ತು ಭಾರತವನ್ನು ಟೀಕಿಸಿ ಹೇಳಿಕೆ ನೀಡಿದ್ದರು.

ಮಾಲ್ಡೀವ್ಸ್‌ ಸಚಿವರ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಮಾಲ್ಡೀವ್ಸ್‌ಗೆ ಪ್ರವಾಸ ಹೋಗುವ ತಮ್ಮ ಪ್ಲ್ಯಾನ್‌ ಅನ್ನು ರದ್ದುಗೊಳಿಸಿರುವುದಾಗಿ ಅನೇಕ ಭಾರತೀಯ ಪ್ರವಾಸಿಗರು ಹೇಳಿಕೊಂಡಿದ್ದಾರೆ. ಹೋಟೆಲ್ ಮತ್ತು ವಿಮಾನ ಟಿಕೆಟ್‌ ಅನ್ನು ರದ್ದುಗೊಳಿಸಿರುವ ಸ್ಕ್ರಿನ್‌ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ #boycottmaldives ಹ್ಯಾಶ್‌ ಟ್ಯಾಗ್‌ ಬಳಸಿರುವುದು ಕಂಡುಬಂದಿದೆ.

ಏತನ್ಮಧ್ಯೆ, ಸಚಿವೆಯ ಹೇಳಿಕೆಗೆ ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ ಸಚಿವರೊಬ್ಬರು ಮಿತ್ರರಾಷ್ಟ್ರದ ನಾಯಕರ ಬಗ್ಗೆ ಇಂತಹ ತೀಕ್ಷ್ಣ ಭಾಷೆ ಬಳಸಿರುವುದು ಸರಿಯಲ್ಲ. ಇಂತಹ ಹೇಳಿಕೆಗಳು ಸರ್ಕಾರದ ನೀತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಮೊಹಮ್ಮದ್‌ ಮುಯಿಝು ಅವರ ಸರ್ಕಾರ ಭಾರತಕ್ಕೆ ಸ್ಪಷ್ಟನೆ ನೀಡಬೇಕಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT