ಕೋಯಿಕ್ಕೋಡ್: ಕೇರಳದಲ್ಲಿ 'ಮಿದುಳು ತಿನ್ನುವ ಅಮೀಬಾ' (ಅಮೀಬಿಕ್ ಮೆನಿಂಗೊಎನ್ಸೆಫಲಿಟಿಸ್) ಸೋಂಕಿನ ಮತ್ತೊಂದು ಪ್ರಕರಣ ವರದಿಯಾಗಿದೆ.

ಉತ್ತರ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 43 ವರ್ಷದ ಮಹಿಳೆಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ ತಗುಲಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದರೊಂದಿಗೆ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಇವೆಲ್ಲರೂ ಕೋಯಿಕ್ಕೋಡ್ನ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ನಾಲ್ವರು ಮಕ್ಕಳು ಸೇರಿದ್ದಾರೆ.

ಈ ತಿಂಗಳಾರಂಭದಲ್ಲಿ 9 ವರ್ಷದ ಬಾಲಕಿ ಸೋಂಕಿಗೊಳಗಾಗಿ ಮೃತಪಟ್ಟಿದ್ದರು.

ಕೋಯಿಕ್ಕೋಡ್, ವಯನಾಡ್ ಹಾಗೂ ಮಲ್ಲಪ್ಪುರಂ ಜಿಲ್ಲೆಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಆಳ–ಅಗಲ | ‘ದೇವರ ನಾಡ’ಲ್ಲಿ ಆತಂಕ ತಂದ ‘ಮಿದುಳು ತಿನ್ನುವ ಅಮೀಬಾ’.ಕೇರಳ: ಮಿದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಳ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.