ಜೈಪುರ: ಭೂ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿ ಹಣದ ಬೇಡಿಕೆಯಿಟ್ಟ ದೂದೂ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಗ್ರಾಮ ಮಟ್ಟದ ಕಂದಾಯ ಅಧಿಕಾರಿಯ ನಿವಾಸಗಳ ಮೇಲೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ.

‘ಭೂ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳದೆ ಇರಲು ಜಿಲ್ಲಾಧಿಕಾರಿ ಹನುಮಾನ್ ಮಲ್ ಢಾಕ ಮತ್ತು ಅಧಿಕಾರಿ ಪಟ್ವಾರಿ ಹಂಸರಾಜ್ ₹25 ಲಕ್ಷ ಬೇಡಿಕೆ ಇಟ್ಟಿದ್ದರು’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ಈ ಬಗ್ಗೆ ದೂರು ದಾಖಲಾದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿ ತಡರಾತ್ರಿಯವರೆಗೆ ಶೋಧಕಾರ್ಯ ನಡೆಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.

‘ದೂರುದಾರನು, ತನ್ನ ಬಳಿ ₹25 ಲಕ್ಷ ಹಣವಿಲ್ಲವೆಂದು ಹೇಳಿದಾಗ, ₹15 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಯಲ್ಲಿ ದೂರು ದಾಖಲಾದ ಬಳಿಕ ದೂರುದಾರರಿಗೆ ರೆಕಾರ್ಡರ್ ಅಳವಡಿಸಿ ಜಿಲ್ಲಾಧಿಕಾರಿಯ ಮನೆಗೆ ಕಳುಹಿಸಲಾಗಿತ್ತು. ಈ ವೇಳೆ ಅವರು ₹7.5 ಲಕ್ಷ ಹಣ ಕೇಳಿರುವುದು ಖಚಿತವಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.