ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ | ಬ್ರಿಕ್ಸ್‌ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

Published 22 ಆಗಸ್ಟ್ 2023, 2:53 IST
Last Updated 22 ಆಗಸ್ಟ್ 2023, 2:53 IST
ಅಕ್ಷರ ಗಾತ್ರ

ನವದೆಹಲಿ:  ಜೊಹಾನಸ್‌ಬರ್ಗ್‌ನಲ್ಲಿ ನಡೆಯಲಿರುವ ಬ್ರಿಕ್ಸ್‌ನ 15ನೇ ಆವೃತ್ತಿಯ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಆಫ್ರಿಕಾಗೆ ತೆರಳಿದರು

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ (ಎಕ್ಸ್‌) ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಜೊಹಾನಸ್‌ಬರ್ಗ್‌ನಲ್ಲಿ ನಡೆಯಲಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಅಭಿವೃದ್ಧಿ, ಅಂತರರಾಷ್ಟ್ರೀಯ ಸಂಬಂಧಗಳು, ಸಹಕಾರ, ಇತರೆ ಕ್ಷೇತಗಳ ಮೇಲಿನ ಕಾಳಜಿ ಕುರಿತು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. 

 ಬ್ರಿಕ್ಸ್‌ನ 15ನೇ ಆವೃತ್ತಿಯ ಶೃಂಗಸಭೆ ಮೂರು ದಿನ ನಡೆಯಲಿದೆ. ಬ್ರೆಜಿಲ್, ಚೀನಾ, ಭಾರತ ಸೇರಿದಂತೆ ಆತಿಥೇಯ ದಕ್ಷಿಣ ಆಫ್ರಿಕಾದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿ ಹಲವು ವಿಷಯಗಳ ಚರ್ಚೆ ನಡೆಸಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವರ್ಚುವಲ್ ಆಗಿ ಪಾಲ್ಗೊಳ್ಳಲಿದ್ದಾರೆ’ ಎಂದು ದಕ್ಷಿಣ ಆಫ್ರಿಕಾ ತಿಳಿಸಿದೆ.

ಆಗಸ್ಟ್‌ 25ರಂದ ಪ್ರಧಾನಿ ಮೋದಿ ಗ್ರೀಸ್‌ ದೇಶಕ್ಕೆ ಭೇಟಿ ನೀಡಲಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲ್ಲ ಎಂದು ಕೆಲ ಮಾಧ್ಯಮಗಳು ಈ ಹಿಂದೆ ವರದಿ ಮಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT