ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಆರ್‌ಎಸ್‌ ದೂರು

Published 11 ಏಪ್ರಿಲ್ 2024, 2:34 IST
Last Updated 11 ಏಪ್ರಿಲ್ 2024, 2:34 IST
ಅಕ್ಷರ ಗಾತ್ರ

ಹೈದರಾಬಾದ್: ಲೋಕಸಭೆ ಚುನಾವಣೆ ಹಿನ್ನೆಲೆ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ ಆರೋಪದಡಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ವಿರುದ್ಧ ಬಿಆರ್‌ಎಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭಾ ಚುನಾವಣಾ ಪ್ರಚಾರದಿಂದ ರೇವಂತ್ ರೆಡ್ಡಿ ಅವರನ್ನು ತಕ್ಷಣವೇ ನಿಷೇಧಿಸಬೇಕು. ಎಂಸಿಸಿ ಉಲ್ಲಂಘನೆ ಆರೋಪದದಡಿ ಅವರ ಹಾಗೂ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಆರ್‌ಎಸ್ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಏಪ್ರಿಲ್ 6ರಂದು ನಗರದ ಹೊರವಲಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸಿಎಂ ರೇವಂತ್ ರೆಡ್ಡಿ ಅವರು ಮಾಡಿದ ಭಾಷಣವನ್ನು ಉಲ್ಲೇಖಿಸಿ, ಬಿಆರ್‌ಎಸ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆಂದು ಬಿಆರ್‌ಎಸ್‌ ಪಕ್ಷ ಆರೋಪಿಸಿದೆ.

ಬಿಆರ್‌ಎಸ್‌ನ ಪ್ರಮುಖರ ನಾಯಕರ ತಿರುಚಿದ ಚಿತ್ರಗಳನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ‘ಎಕ್ಸ್‌‘ನಲ್ಲಿ ಹಂಚಿಕೊಂಡಿದೆ. ಹೀಗಾಗಿ ಬಿಜೆಪಿ ಪಕ್ಷದ ‘ಎಕ್ಸ್‌‘ ಖಾತೆಯನ್ನು ಪ್ರಚಾರ ಕ್ರಮದಿಂದ ತಕ್ಷಣವೇ ನಿಷೇಧಿಸುವಂತೆ ಬಿಆರ್‌ಎಸ್‌ ಪಕ್ಷ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT