ಆಡಳಿತಾರೂಢ ಬಿಆರ್‌ಎಸ್ ಬಿಜೆಪಿಯ ‘ಬಿ ಟೀಮ್’ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿ ಪಕ್ಷದೊಂದಿಗೆ ಯಾವುದೇ ಮೈತ್ರಿ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದಾರೆ.
ತಮ್ಮ ಪಕ್ಷದ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಭ್ರಷ್ಟಾಚಾರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಕ್ರಮ ತೆಗೆದುಕೊಳ್ಳದಂತೆ ಕೇಂದ್ರ ಸರ್ಕಾರವನ್ನು ತಡೆದವರು ಯಾರು ಎಂದು ಪ್ರಶ್ನಿಸಿದರು.
ಹೈದರಾಬಾದ್‌ನಲ್ಲಿ ನಡೆದ ಸಭೆಯಲ್ಲಿ ಕೈಗಾರಿಕೋದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ರಾಮರಾವ್, ಕೇರಳ, ಕರ್ನಾಟಕ, ಗುಜರಾತ್ ಮತ್ತು ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ಕಂಪನಿಗಳು ಸ್ಥಳಾಂತರಗೊಳ್ಳಲು ರಾಜ್ಯದ ಸ್ಥಿರ ಸರ್ಕಾರ ಮತ್ತು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸಮರ್ಥ ನಾಯಕತ್ವವೇ ಕಾರಣವೆಂದು ಪ್ರತಿಪಾದಿಸಿದರು.
ರಾಜಕೀಯದಲ್ಲಿ ಅಸ್ಥಿರತೆ ಉಂಟಾದರೆ, ಕೈಗಾರಿಕಾ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಬಿಆರ್‌ಎಸ್ ಸರ್ಕಾರವು ಸಾಲ ನೀಡಿಕೆಯ ಪ್ರಮಾಣವನ್ನು ಹೆಚ್ಚಿಸಿದ್ದು, ಇಂಧನ, ನೀರಾವರಿ ಮತ್ತು ಆರೋಗ್ಯದಂತಹ ಉತ್ಪಾದಕ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿದೆ ಎಂದು ಅವರು ತಿಳಿಸಿದರು.