ಜಮ್ಮು: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದೆ.

ಮೇ 8ರ ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದೆ ಎಂದು ಗಡಿ ಭದ್ರತಾ ಪಡೆ ಶುಕ್ರವಾರ ಮುಂಜಾನೆ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.

ಗುಂಡಿನ ದಾಳಿಯಲ್ಲಿ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಬೆಳಿಗ್ಗೆ ಆ ಪ್ರದೇಶದಲ್ಲಿ ಸಂಪೂರ್ಣ ಶೋಧದ ನಂತರ ಸ್ಪಷ್ಟವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಾಪಕ ಮಿಲಿಟರಿ ಸಂಘರ್ಷದ ಭೀತಿಯ ನಡುವೆ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಗುರುವಾರ ರಾತ್ರಿ ಜಮ್ಮು, ಪಠಾಣ್ಕೋಟ್, ಉಧಂಪುರ ಮತ್ತು ಇತರ ಕೆಲವು ಸ್ಥಳಗಳಲ್ಲಿರುವ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಸೇನೆ ನಡೆಸಿದ ಯತ್ನವನ್ನು ಭಾರತ ಕ್ಷಿಪಣಿಗಳು ಮತ್ತು ಡ್ರೋನ್ಗಳ ಭಾರತೀಯ ಸೇನೆ ತಡೆಹಿಡಿದಿದೆ.

ಈ ಎಲ್ಲ ಪ್ರದೇಶಗಳನ್ನು ಬ್ಲಾಕ್ಔಟ್ ಮಾಡಿ ಭಾರತವೂ ಪ್ರತಿ ದಾಳಿ ನಡೆಸಿದೆ.

ಭದ್ರತಾ ಕಾರಣದಿಂದಾಗಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯವನ್ನು ರದ್ದು ಮಾಡಿ, ಫ್ಲಡ್ಲೈಟ್ಸ್ ಅನ್ನು ಆಫ್ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.