ನವದೆಹಲಿ/ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಿಎಸ್ಎಫ್ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದ ಪರಿಣಾಮ, ಕಾನ್ಸ್ಟೆಬಲ್ ಒಬ್ಬರು ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಈ ಘಟನೆ ಶನಿವಾರ ರಾತ್ರಿ 10:30ರ ಸುಮಾರಿಗೆ ಧೂಲಿಯನ್ನಲ್ಲಿರುವ ಬಿಎಸ್ಎಫ್ ಶಿಬಿರದಲ್ಲಿ ನಡೆದಿದೆ. ಕಾನ್ಸ್ಟೆಬಲ್ ಶಿವಂ ಕುಮಾರ್ ಮಿಶ್ರಾ ಅವರು ಹೆಡ್ ಕಾನ್ಸ್ಟೆಬಲ್ ರತನ್ ಸಿಂಗ್ ಶೆಖಾವತ್ (56) ಅವರನ್ನು ತಮ್ಮ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿ, ಹತ್ಯೆ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಘಟನೆಗೆ ಕಾರಣವೇನೆಂದು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೆಖಾವತ್ 1989ರಲ್ಲಿ ಬಿಎಸ್ಎಫ್ಗೆ ಸೇರಿ 119ನೇ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸಿದರು. ಅವರು ರಾಜಸ್ಥಾನದ ಜೈಪುರದವರಾಗಿದ್ದು, ಆರೋಪಿಯೂ ಅದೇ ಬೆಟಾಲಿಯನ್ಗೆ ಸೇರಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.