ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಎಸ್‌ಎಫ್ ಶೋಧ: ಬಾಂಗ್ಲಾ ಗಡಿಯಲ್ಲಿ ₹3.12 ಕೋಟಿ ಮೌಲ್ಯದ ಚಿನ್ನದ ಬಿಸ್ಕತ್ ವಶ

Published : 27 ಆಗಸ್ಟ್ 2023, 4:47 IST
Last Updated : 27 ಆಗಸ್ಟ್ 2023, 4:47 IST
ಫಾಲೋ ಮಾಡಿ
Comments

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ₹3.12 ಕೋಟಿ ಮೌಲ್ಯ ಚಿನ್ನದ ಬಿಸ್ಕತ್‌ಗಳನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪೆಟ್ರಾಪೋಲ್ ಚೆಕ್‌ಪಾಯಿಂಟ್‌ನಲ್ಲಿ ತಪಾಸಣೆ ನಡೆಸಿದ ಬಿಎಸ್‌ಎಸ್, ಟ್ರಕ್‌ನಲ್ಲಿ ಸಾಗಿಸುತ್ತಿದ್ದ ₹3.12 ಕೋಟಿ ಮೌಲ್ಯದ ಚಿನ್ನದ ಬಿಸ್ಕತ್ ವಶಪಡಿಸಿದೆ.

ಈ ಟ್ರಕ್ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿತ್ತು. ಚಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎಫ್‌ 145 ಬೆಟಾಲಿಯನ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು.

ಟ್ರಕ್‌ನಿಂದ ಒಟ್ಟು 5.24 ಕೆ.ಜಿ ತೂಕದ 45 ಚಿನ್ನದ ಬಿಸ್ಕತ್ ವಶಪಡಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT