ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಗಳಿಕೆಯಲ್ಲಿ ಹಿಂದೆಬಿದ್ದಿರುವ ಬಿಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳು ವಿಧಾನ ಭವನದ ಸಂಕೀರ್ಣದಲ್ಲಿರುವ ಕಚೇರಿಗಳನ್ನೂ ಕಳೆದುಕೊಳ್ಳುವ ಸಾಧ್ಯತೆಗಳಿವೆ.

ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಒಂದು ಸ್ಥಾನ ಗೆದ್ದಿದ್ದರೆ, ಕಾಂಗ್ರೆಸ್ ಎರಡು ಸೀಟುಗಳನ್ನಷ್ಟೇ ಗಳಿಸಿದೆ.

ಎಂಟು ಕ್ಷೇತ್ರಗಳನ್ನು ಗೆದ್ದಿರುವ ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮತ್ತು ಆರು ಸ್ಥಾನಗಳನ್ನು ಪಡೆದಿರುವ ನಿಶಾದ್ ಪಕ್ಷಗಳಿಗೆ ವಿಧಾನ ಭವನದಲ್ಲಿ ಕಚೇರಿ ಕೊಠಡಿ ಹಂಚಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ವಿಧಾನಸಭೆಯ ಒಟ್ಟು ಸ್ಥಾನಗಳ ಪೈಕಿ ಕನಿಷ್ಠ ಶೇ 1ರಷ್ಟು ವಿಧಾನಸಭಾ ಸ್ಥಾನಗಳನ್ನು ಅಥವಾ ಕನಿಷ್ಠ ನಾಲ್ಕು ಸ್ಥಾನಗಳನ್ನು ಗೆದ್ದ ಪಕ್ಷಕ್ಕೆ ವಿಧಾನ ಭವನದಲ್ಲಿ ಕಚೇರಿ ಒದಗಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

2017ರ ಚುನಾವಣೆಯಲ್ಲಿ ಆರ್‌ಎಲ್‌ಡಿ ಒಂದು ಸ್ಥಾನವನ್ನು ಮಾತ್ರ ಗಳಿಸಿತ್ತು. ಹೀಗಾಗಿ ಪಕ್ಷಕ್ಕೆ ವಿಧಾನ ಭವನದಲ್ಲಿ ಕಚೇರಿ ಸಿಕ್ಕಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.