ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಮಿಳುನಾಡು ಬಿಎಸ್‌ಪಿ ಅಧ್ಯಕ್ಷನ ಬರ್ಬರ ಹತ್ಯೆ

Published 5 ಜುಲೈ 2024, 23:26 IST
Last Updated 5 ಜುಲೈ 2024, 23:26 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅರ್ಮ್‌ಸ್ಟ್ರಾಂಗ್ ಅವರನ್ನು ಶುಕ್ರವಾರ ಸಂಜೆ ಬೈಕ್‌ನಲ್ಲಿ ಬಂದಿದ್ದ ಆರು ಜನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಪೆರಂಬೂರ್‌ನಲ್ಲಿರುವ ಅವರ ಮನೆಯ ಬಳಿಯೇ ಕೃತ್ಯ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅರ್ಮ್‌ಸ್ಟ್ರಾಂಗ್ ಅವರನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಗಿದ್ದು, ಮಾರ್ಗದಲ್ಲಿಯೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ಅರ್ಮ್‌ಸ್ಟ್ರಾಂಗ್ ಚೆನ್ನೈ ಮಹಾನಗರಪಾಲಿಕೆಯ ಮಾಜಿ ಸದಸ್ಯರೂ ಹೌದು. ಹಲ್ಲೆ ನಡೆಸಿದ ದುಷ್ಕರ್ಮಿಗಳ ಶೋಧಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT